ಮಣ್ಣಗುಡ್ಡೆ ಸರಕಾರಿ ಶಾಲೆಯಲ್ಲಿ 119ನೇ ಸಾಹಿತ್ಯ ಅಭಿರುಚಿ ಕಾರ್ಯಕ್ರಮ


ಮಂಗಳೂರು: ಅಮೃತ ಪ್ರಕಾಶ ಪತ್ರಿಕೆ ಮಂಗಳೂರು ಹಾಗೂ ದ.ಕ.ಜಿ.ಪ ಹಿರಿಯ ಪ್ರಾಥಮಿಕ ಶಾಲೆ ಮಣ್ಣಗುಡ್ಡೆ ಇವರ ಜಂಟಿ ಆಶ್ರಯದಲ್ಲಿ 119ನೇಯ ಸಾಹಿತ್ಯ ಅಭಿರುಚಿ ಕಾರ್ಯಕ್ರಮವು ಜೂನ್ 27ರಂದು ಶನಿವಾರ ದ.ಕ. ಜಿ.ಪ ಹಿರಿಯ ಪ್ರಾಥಮಿಕ ಶಾಲೆ ಮಣ್ಣಗುಡ್ಡ ಇಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯೋಪಾಧ್ಯಾಯರಾದ ನಳಿನಿ ಅವರು ವಹಿಸಿದ್ದರು.ಮುಖ್ಯ ಸಂಪನ್ಮೂಲ ಅತಿಥಿಯಾಗಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಪುಷ್ಪರಾಜ್ ಬಿ.ಎನ್ ಮಾತನಾಡುತ್ತಾ, ವಿದ್ಯಾರ್ಥಿಗಳು ಸಾಹಿತ್ಯದ ಬಗ್ಗೆ ಅಭಿರುಚಿ ಬೆಳೆಸಿಕೊಳ್ಳಲುಓದುವ ಚಟು ವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು ಪೂರಕ ಎಂದರು.


ಅತಿಥಿಗಳಾಗಿ ಹಿರಿಯ ಬರಹಗಾರರಾದ ಎನ್. ಸುಬ್ರಾಯ ಭಟ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಸುರೇಶ್ ಚಂದ್ರ ಶೆಟ್ಟಿ ಅತಿಥಿಯಾಗಿ ಭಾಗವಹಿಸಿ ಕಾರ್ಯ ಕ್ರಮವನ್ನು ಯಶಸ್ವಿಗೊಳಿಸಿದರು. ಸುರೇಖಾ ಯಳವಾರ ಕಾರ್ಯಕ್ರಮ ನಿರೂಪಿಸಿದರು. ಅಮೃತ ಪ್ರಕಾಶ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕಿ ಡಾ.ಮಾಲತಿ ಶೆಟ್ಟಿ ಮಾಣೂರು ಪ್ರಾಸ್ತಾವಿಕವಾಗಿ ಮಾತಾಡಿ ಎಲ್ಲರನ್ನು ಸ್ವಾಗತಿಸಿದರು.

error: Content is protected !!