ಪಿ.ಎ. ಕಾಲೇಜ್ ಬಸ್ ಚಾಲಕನ ಅವಾಂತರ: ಬೈಕ್ ಸವಾರನನ್ನುಅಡಿಗೆ ಹಾಕಿ ಧರೆಗೆ ಡಿಕ್ಕಿ, ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರು!

ಕೊಣಾಜೆ: ಕೊಣಾಜೆಯಿಂದ ಮಂಗಳೂರು ಕಡೆಗೆ ವಿದ್ಯಾರ್ಥಿಗಳನ್ನು ಕರೆದುಕೊಂಡು ಬರುತ್ತಿದ್ದ ಪಿ.ಎ. ಕಾಲೇಜಿನ ಬಸ್ ನಾಟೆಕಲ್ ತಿರುವಿನಲ್ಲಿ ದ್ವಿಚಕ್ರ ವಾಹನವನ್ನು ಓವರ್‌ಟೇಕ್ ಮಾಡಲು ಯತ್ನಿಸಿದ ವೇಳೆ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ವಾಲಿದ ಘಟನೆ ಇಂದು ಸಂಜೆ ನಡೆದಿದೆ. ಅಪಘಾತದಲ್ಲಿ ಬಸ್‌ನಲ್ಲಿದ್ದ ವಿದ್ಯಾರ್ಥಿಗಳು ಚಿಕ್ಕಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಬಸ್ಸಿನಡಿ ಸಿಲುಕಿದ ದ್ವಿಚಕ್ರ ಸವಾರ ಗಂಭೀರ ಗಾಯಗೊಂಡಿದ್ದಾನೆ.


ಘಟನೆ ನಡೆದ ಕೂಡಲೇ ಸಾರ್ವಜನಿಕರು ತಕ್ಷಣ ಕ್ರೇನ್ ತರಿಸಿ ಬಸ್‌ನ್ನು ಮೇಲಕ್ಕೆತ್ತಿ ದ್ವಿಚಕ್ರ ಸವಾರನನ್ನು ಹೊರತೆಗೆದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ.


ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಭಾರೀ ಸಂಖ್ಯೆಯಲ್ಲಿ ಸಾರ್ವಜನಿಕರು ಜಮಾಯಿಸಿದ್ದು, ಕೆಲಕಾಲ ಸಂಚಾರಕ್ಕೂ ಅಡಚಣೆ ಉಂಟಾಯಿತು.

error: Content is protected !!