
ಹಳೆಯಂಗಡಿ: ಭಾರತ ಸರಕಾರ, ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ, ಮೈ ಭಾರತ್ ದಕ್ಷಿಣ ಕನ್ನಡ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಂಗಳೂರು ಹಾಗೂ ಕರ್ನಾಟಕ ರಾಜ್ಯ ಪ್ರಶಸ್ತಿ ಪುರಸ್ಕೃತ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶ್ರೀ ವಿದ್ಯಾ ವಿನಾಯಕ ಯುವಕ ಮಂಡಲ(ರಿ) ಹಳೆಯಂಗಡಿ ಇದರ ಆಶ್ರಯದಲ್ಲಿ ಶ್ರೀ ವಿದ್ಯಾ ವಿನಾಯಕ ರಜತ ಸೇವಾ ಟ್ರಸ್ಟ್ (ರಿ) ಕಿಶೋರ – ಕಿಶೋರಿ ಸಂಘ, ಶ್ರೀ ವಿದ್ಯಾ ವಿನಾಯಕ ಯುವಕ ಮಂಡಲ, ಯುವತಿ ಮಂಡಲ(ರಿ) ಹಳೆಯಂಗಡಿ ದ.ಕ. ಇದರ ಸಹಕಾರದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಅತ್ತೂರು ಕೆಮ್ರಾಲ್ ಇವರ ಮಾರ್ಗದರ್ಶನದಲ್ಲಿ ಡೆಂಗ್ಯೂ ಜ್ವರದ ಬಗ್ಗೆ ಮಾಹಿತಿ ಶಿಬಿರವು ನಿನ್ನೆ ಯುವಕ ಮಂಡಲದ ಸಭಾಭವನದಲ್ಲಿ ಜರಗಿತು.

ಪ್ರಾಥಮಿಕ ಆರೋಗ್ಯ ಕೇಂದ್ರ ಅತ್ತೂರು ಕೆಮ್ರಾಲ್ ಹಳೆಯಂಗಡಿ ಆಶಾ ಕಾರ್ಯಕರ್ತೆ ಸವಿತಾ ಇವರು ಡೆಂಗ್ಯೂ ರೋಗದ ಬಗ್ಗೆ ಸೂಕ್ತ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಜಂಟಿ ಸಂಸ್ಥೆಯ ಸದಸ್ಯರು, ಕಿಶೋರ, ಕಿಶೋರಿ ಸಂಘದ ವಿದ್ಯಾರ್ಥಿಗಳು, ಪೋಷಕರು ಕಾರ್ಯಕ್ರಮದಲ್ಲಿ ಭಾಗವಹಿಸಿ ಆರೋಗ್ಯ ಮಾಹಿತಿ ಪಡೆದುಕೊಂಡರು.
