ಮೂಲ್ಕಿ: ಗ್ರಾಮ ಪಂಚಾಯತ್ ಹಳೆಯಂಗಡಿ, ಪ್ರಾಥಮಿಕ ಆರೋಗ್ಯ ಕೇಂದ್ರ ಕೆಮ್ರಾಲ್ ಅತ್ತೂರು ಇವರ ನೇತೃತ್ವ ಮತ್ತು ಸಹಕಾರದಲ್ಲಿ ಕರ್ನಾಟಕ ರಾಜ್ಯ ಪ್ರಶಸ್ತಿ ಪುರಸ್ಕೃತ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶ್ರೀ ವಿದ್ಯಾ ವಿನಾಯಕ ಯುವಕ ಮಂಡಲ (ರಿ) ಹಳೆಯಂಗಡಿ, ಶ್ರೀ ವಿದ್ಯಾ ವಿನಾಯಕ ರಜತ ಸೇವಾ ಟ್ರಸ್ಟ್(ರಿ) ಹಳೆಯಂಗಡಿ, ಯುವತಿ ಮಂಡಲ(ರಿ) ಹಳೆಯಂಗಡಿ ಕಿಶೋರ-ಕಿಶೋರಿ ಸಂಘ ಹಳೆಯಂಗಡಿ ಇವರ ಸಹಕಾರದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ದಕ್ಷಿಣ ಕನ್ನಡ ಇದರ ವತಿಯಿಂದ “ಪೋಲಿಯೋ ಮುಕ್ತ ಭಾರತ” ಶೀರ್ಷಿಕೆಯಡಿಯಲ್ಲಿ ರಾಜ್ಯಾದ್ಯಂತ ನಡೆಯುತ್ತಿರುವ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನ ಕಾರ್ಯಕ್ರಮದ ಅಂಗವಾಗಿ ಹಳೆಯಂಗಡಿ ಶ್ರೀ ವಿದ್ಯಾವಿನಾಯಕ ಯುವಕ ಮಂಡಲದ ಸಭಾಂಗಣದಲ್ಲಿ ಚಿಕ್ಕ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವ ಕಾರ್ಯಕ್ರಮ “ಪ್ರಾಥಮಿಕ ಆರೋಗ್ಯ ಕೇಂದ್ರ ಕೆಮ್ರಾಲ್ ಅತ್ತೂರು” ಇವರ ಸಹಯೋಗದಲ್ಲಿ ನಿನ್ನೆ ಜರುಗಿತು.

ಈ ಅಭಿಯಾನಕ್ಕೆ ಹಳೆಯಂಗಡಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅರುಣ್ ಪ್ರದೀಪ್ ಡಿ’ಸೋಜ ಇವರು ಚಾಲನೆಯನ್ನು ನೀಡಿದರು.

ಈ ಸಂದರ್ಭದಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು, ಜಂಟಿ ಸಂಸ್ಥೆಯ ಪದಾಧಿಕಾರಿಗಳು, ಮಂಡಲದ ಸದಸ್ಯರು ಉಪಸ್ಥಿತರಿದ್ದರು.

