ಶಿರಸಿ: ಅಕ್ರಮ ಸಂಬಂಧಕ್ಕೆ ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಕೊಲ್ಲಿಸಿದ ಪತ್ನಿ!

ಕುಮಟಾ: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಶಿಂಗನಮನೆ ಗ್ರಾಮದಲ್ಲಿ ವ್ಯಕ್ತಿಯೊಬ್ಬರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಆತನ ಪತ್ನಿ ಹಾಗೂ ಸೋದರನನ್ನು ಪೊಲೀಸರು ಬಂಧಿಸಿದ್ದಾರೆ.
ಮೃತ ವ್ಯಕ್ತಿಯನ್ನ ಪರಮೇಶ್ವರ್ ನಾಯ್ಕ ಎಂದು ಗುರುತಿಸಲಾಗಿದೆ. ಅವರು ಶಿಂಗನಮನೆ ಗ್ರಾಮದ ನಿವಾಸಿಯಾಗಿದ್ದು, ಅರಣ್ಯ ಪ್ರದೇಶದಲ್ಲಿ ಶವ ಪತ್ತೆಯಾದ ನಂತರ ಸ್ಥಳೀಯರಲ್ಲಿ ಆತಂಕ ಮೂಡಿತ್ತು. ಮಾಹಿತಿ ತಿಳಿಯುತ್ತಿದ್ದಂತೆ ಶಿರಸಿ ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದರು.


ಪ್ರಾಥಮಿಕ ತನಿಖೆಯಲ್ಲಿ, ಪರಮೇಶ್ವರ್ ನಾಯ್ಕ್ ಸೋದರನಾಗಿರುವ ಪರಮೇಶ್ವರ ತಿಮ್ಮ ನಾಯ್ಕ್ ಜೊತೆ ಪತ್ನಿ ಅರ್ಪಿತಾ ಅಕ್ರಮ ಸಂಬಂಧ ಹೊಂದಿದ್ದಳು ಎನ್ನಲಾಗಿದೆ. ಈ ವಿಷಯ ಪರಮೇಶ್ವರ್ ನಾಯ್ಕ್ ಅವರಿಗೆ ತಿಳಿದಿದ್ದರೂ, ಮಕ್ಕಳ ಭವಿಷ್ಯವನ್ನ ಗಮನದಲ್ಲಿಟ್ಟುಕೊಂಡು ಕುಟುಂಬದಲ್ಲಿ ಯಾವುದೇ ಗಲಾಟೆ ಉಂಟಾಗದಂತೆ ಮೌನವಾಗಿದ್ದರು ಎನ್ನಲಾಗಿದೆ.
ಇದೇ ವಿಚಾರದಿಂದ ದಂಪತಿ ನಡುವೆ ಆಗಾಗ ಭಿನ್ನಾಭಿಪ್ರಾಯ ಉಂಟಾಗುತ್ತಿದ್ದು ಈ ನಡುವೆ, ಪತ್ನಿ ತನ್ನ ಪ್ರಿಯಕರನೊಂದಿಗೆ ಸೇರಿ ಪರಮೇಶ್ವರ್ ನಾಯ್ಕ್ ಅವರ ಹತ್ಯೆಗೆ ಸಂಚು ರೂಪಿಸಿದ್ದಳು. ಪೊಲೀಸರು ಇಬ್ಬರನ್ನೂ ವಶಕ್ಕೆ ಪಡೆದು ವಿಚಾರಣೆ ತೀವ್ರಗೊಳಿಸಿದ್ದಾರೆ.

error: Content is protected !!