
ಮಂಗಳೂರು: ನಿನ್ನೆಯಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ನಗರದ ಕಂಕನಾಡಿ ಸಮೀಪ ನಾಗುರಿ ಎಂಬಲ್ಲಿ ತಡೆಗೋಡೆ ಕುಸಿದು ಮನೆಯೊಂದರ ಮೇಲ್ಛಾವಣಿಗೆ ಬಿದ್ದ ಪರಿಣಾಮ ಓರ್ವ ಮಹಿಳೆ ಹಾಗೂ ಇಬ್ಬರು ಮಕ್ಕಳು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.

ಅಗ್ನಿಶಾಮಕ ಹಾಗೂ ತುರ್ತು ಸೇವಾ ದಳದ ಸಿಬ್ಬಂದಿಗಳು ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರಿಸಿದ್ದು, ಸಿಲುಕಿದ್ದವರನ್ನು ಹೊರತೆಗೆದಿದ್ದಾರೆ. ಮೃತಪಟ್ಟವರು ಬಿಹಾರ ಮೂಲದವರಾಗಿದ್ದು ಕಟ್ಟಡ ಕೆಲಸಕ್ಕೆ ಬಂದಿದ್ದರು ಎನ್ನಲಾಗಿದೆ. ಮನೆಯಲ್ಲಿ ಸಿಲುಕಿರುವ ಮೃತದೇಹಗಳನ್ನು ಮೇಲಕ್ಕೆತ್ತುವ ಕಾರ್ಯವೂ ಮುಂದುವರಿದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
