
ಮಂಗಳೂರು: ನಗರದ ನಾಗುರಿಯಲ್ಲಿ ಮನೆಯ ಮೇಲೆ ತಡೆಗೋಡೆ ಕುಸಿದು ಮೂವರು ಸಾವನ್ನಪ್ಪಿದ ಘಟನೆಯ ಹಿನ್ನಲೆಯಲ್ಲಿ ದೆಹಲಿ ಪ್ರವಾಸದಲ್ಲಿರುವ ಆರೋಗ್ಯ ಸಚಿವ ಯು.ಟಿ.ಖಾದರ್ ಅವರು ತಮ್ಮ ಭೇಟಿಯನ್ನು ಅರ್ಧಕ್ಕೆ ಮೊಟಕುಗೊಳಿಸಿದ್ದಾರೆ.
ಘಟನೆಯ ಮಾಹಿತಿ ತಿಳಿದ ತಕ್ಷಣ ಜಿಲ್ಲಾಧಿಕಾರಿಗಳನ್ನು ಸಂಪರ್ಕಿಸಿದ ಸಚಿವರು, ತ್ವರಿತ ಪರಿಹಾರ ಕ್ರಮಗಳಿಗೆ ಸೂಚಿಸಿದ್ದಾರೆ.
ಗಾಯಾಳುಗಳಿಗೆ ಸರಕಾರದ ವತಿಯಿಂದಲೇ ಆಸ್ಪತ್ರೆಯಲ್ಲಿ ಚಿಕಿತ್ಸಾ ವೆಚ್ಚ ಭರಿಸಲು ಹಾಗೂ ಮೃತರ ಕುಟುಂಬದವರಿಗೆ ಇಂದೇ ಪರಿಹಾರ ಮೊತ್ತ ನೀಡಲು ಅವರು ನಿರ್ದೇಶಿಸಿದ್ದಾರೆ. ಸಚಿವರು ಇಂದು ಮಧ್ಯಾಹ್ನ ಮಂಗಳೂರು ತಲುಪಲಿದ್ದು ಘಟನಾ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ.

ರಾಜ್ಯ ಸರಕಾರ ತಲಾ 5 ಲಕ್ಷ ರೂ. ಘೋಷಣೆ!
ಮೃತರ ಕುಟುಂಬಗಳಿಗೆ ರಾಜ್ಯ ಸರಕಾರ ತಲಾ 5 ಲಕ್ಷ ರೂ. ಪರಿಹಾರವನ್ನು ಘೋಷಣೆ ಮಾಡಿದೆ.
ಮೃತ ಪಟ್ಟವರ ಗುರುತು ಪತ್ತೆ!
ಅನಾಮಿಕ ಚೌರಾಸಿಯ(8 ವರ್ಷ), ಪರಿ(4 ವರ್ಷ), ಶಾಂತ (46 ವರ್ಷ)
ರಕ್ಷಣಾ ಕಾರ್ಯದಲ್ಲಿ ಬದುಕಿ ಉಳಿದವರು
ಅಲ್ಕಾ(14 ವರ್ಷ), ಅನುಷಾ(11 ವರ್ಷ), ಬಾಲಕೃಷ್ಣ(48 ವರ್ಷ)
ಇವರೆಲ್ಲರೂ ಮೂಲತ ಬಿಹಾರ ರಾಜ್ಯದವರಾಗಿದ್ದು ಕಂಕನಾಡಿ ಗ್ರಾಮದ, ಕಂಕನಾಡಿ ಪೊಲೀಸ್ ಠಾಣಾ ಹಿಂಬಾಗದಲ್ಲಿ ಕಳೆದ 20 ವರ್ಷಗಳಿಂದ ವಾಸ ಮಾಡಿಕೊಂಡಿದ್ದರು.