ಭಾರೀ ಮಳೆ ಹಿನ್ನೆಲೆ: ನಾಳೆ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು: ಭಾರೀ ಮಳೆಯ ಹಿನ್ನೆಲೆ ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢ ಹಾಗೂ ಪಿಯು ಕಾಲೇಜುಗಳಿಗೆ ನಾಳೆ ಜು.2ರ ಗುರುವಾರ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ ಹಾಗೂ ದ.ಕ.ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ತಿಳಿಸಿದ್ದಾರೆ.

ಆದರೆ ಪದವಿ, ವೈದ್ಯಕೀಯ, ಡಿಪ್ಲೊಮಾ ಹಾಗೂ ಇತರ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಈ ರಜೆ ಅನ್ವಯಿಸುವುದಿಲ್ಲ ಎಂದು ತಿಳಿಸಲಾಗಿದೆ.

error: Content is protected !!