ಪುನರೂರು ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿಗಳಿಗೆ ತೋಕೂರು ಯುವಕ ಸಂಘದಿಂದ ಸಮವಸ್ತ್ರ ಕೊಡುಗೆ

ಮೂಲ್ಕಿ: ಕನ್ನಡ ಮಾಧ್ಯಮ ಶಾಲೆಗಳಿಗೆ ಪ್ರೋತ್ಸಾಹ ನೀಡುವ ಸಲುವಾಗಿ, ಪುನರೂರು ಅನುದಾನಿತ ಭಾರತ ಮಾತಾ ಹಿರಿಯ ಪ್ರಾಥಮಿಕ ಶಾಲಾಭಿವೃದ್ಧಿ ಸಮಿತಿಯ ಮನವಿಯ ಮೇರೆಗೆ ಆರ್ಥಿಕವಾಗಿ ಹಿಂದುಳಿದ ಮಕ್ಕಳಿಗೆ ತೋಕೂರು ಯುವಕ ಸಂಘ ಹಾಗೂ ಮಹಿಳಾ ಮಂಡಲದ ವತಿಯಿಂದ ಸಮವಸ್ತ್ರಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಯುವಕ ಸಂಘ ಹಾಗೂ ಮಹಿಳಾ ಮಂಡಲದ ಪದಾಧಿಕಾರಿಗಳು, ಶಾಲಾಭಿವೃದ್ಧಿ ಸಮಿತಿಯ ಸದಸ್ಯರು, ಹಾಗೂ ಶಾಲಾ ಅಧ್ಯಾಪಕ ವರ್ಗದವರು ಉಪಸ್ಥಿತರಿದ್ದರು.

error: Content is protected !!