
ಬಳ್ಳಾರಿ: ಮದುವೆಯಾಗಿ ಎರಡು ಮಕ್ಕಳಿದ್ದರೂ ವಿದ್ಯಾರ್ಥಿನಿಯನ್ನು ಲೈಂಗಿಕವಾಗಿ ಬಳಸಿಕೊಂಡ ಆರೋಪದ ಮೇಲೆ ಕಾಮುಕ ಉಪನ್ಯಾಸಕನನ್ನು ಪೊಲೀಸರು ಬಂಧಿಸಿದ್ದಾರೆ. ಬಳ್ಳಾರಿ ನಗರದ ಖಾಸಗಿ ಕಾಲೇಜೊಂದರ ಸಸ್ಯಶಾಸ್ತ್ರ ವಿಭಾಗದ ಉಪನ್ಯಾಸಕ ರವಿಕಿರಣ್ ಬಂಧಿತ ಆರೋಪಿ.

2025ರಲ್ಲಿ ಉಪನ್ಯಾಸಕ ರವಿಕಿರಣ್ ಹಾಗೂ ವಿದ್ಯಾರ್ಥಿನಿ ನಡುವೆ ಸಲುಗೆ ಬೆಳೆದಿದ್ದು ʻನಿನ್ನನ್ನು ಮದುವೆಯಾಗುತ್ತೇನೆʼ ಎಂದು ನಂಬಿಸಿ ಬೇರೆ ಬೇರೆ ಕಡೆಗಳಿಗೆ ಕರೆದೊಯ್ದು ಲೈಂಗಿಕವಾಗಿ ಬಳಸಿಕೊಂಡಿದ್ದಾನೆ ಎನ್ನಲಾಗಿದೆ. ಪೊಲೀಸರು ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಜೈಲಿಗಟ್ಟಿದ್ದಾರೆ.
