ಬೇಬಿ ಕೇರ್‌ ನಲ್ಲಿ ಮಕ್ಕಳಿಗೆ ಹಿಂಸೆ: ಸಿಬ್ಬಂದಿಗೆ ನೋಟಿಸ್!

 

ಬೆಂಗಳೂರು: ಬೇಬಿ ಕೇರ್‌ ಸೆಂಟರ್‌ ನಲ್ಲಿ ಮಕ್ಕಳ ಮೇಲೆ ದೈಹಿಕ ಹಿಂಸೆ ನೀಡಿರುವ ವಿಡಿಯೋ ವೈರಲ್ ಆದ ಬೆನ್ನಲ್ಲೇ ಹೆಚ್‌ಎಎಲ್‌ ಪೊಲೀಸರು ಅಲ್ಲಿನ ಸಿಬ್ಬಂದಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಿದ್ದಾರೆ. ಇಂದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಿದ್ದು ಪ್ರಾಥಮಿಕ ತನಿಖೆಯಲ್ಲಿ ವೈರಲ್ ಆಗಿರುವ ವಿಡಿಯೋ ಹಳೆಯದು ಅನ್ನೋದು ಬೆಳಕಿಗೆ ಬಂದಿದೆ. ಐಟಿ ಕಂಪನಿ ಉದ್ಯೋಗಿಗಳಿಗಾಗಿಯೇ ಈ ಬೇಬಿಕೇರ್‌ನ ತೆರಯಲಾಗಿತ್ತು. ಬೇಬಿ ಕೇರ್‌ನಲ್ಲಿ ಕೆಲಸ ಮಾಡೋ ಸಿಬ್ಬಂದಿಯನ್ನು ಕಂಪನಿಯವರೇ ನಿಯೋಜನೆ ಮಾಡಿದ್ದು ಸದ್ಯ 18 ಮಕ್ಕಳು ಬೇಬಿಕೇರ್‌ನಲ್ಲಿ ಇರುತ್ತಿದ್ದು, ಮಕ್ಕಳ ಮೇಲೆ ದೈಹಿಕ ಹಿಂಸೆ ವಿಡಿಯೋ ವೈರಲ್ ಆದ ನಂತರ ಬೇರೆ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ.


ಬ್ರೂಕ್ ಫೀಲ್ಡ್‌ನಲ್ಲಿರುವ ಬೇಬಿ ಕೇರ್ ಸೆಂಟರ್‌ನಲ್ಲಿ ಮಕ್ಕಳಿಗೆ ದೈಹಿಕವಾಗಿ ಚಿತ್ರಹಿಂಸೆ ನೀಡಿ ವಿಕೃತಿ ಮೆರೆದಿದ್ದರು. ಇದನ್ನು ತಿಳಿದ ಮಕ್ಕಳ ಸಹಾಯವಾಣಿ ಅಧಿಕಾರಿಗಳು ಮಕ್ಕಳ ಮೇಲೆ ಆಯಾಗಳು ಕ್ರೌರ್ಯ ಮೆರೆದಿರುವ ವೀಡಿಯೋ ಪರಿಶೀಲನೆ ಮಾಡಿ, ಐವರು ಆಯಾಗಳ ಮೇಲೆ ಹೆಚ್‌ಎಎಲ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಅದರನ್ವಯ ಮಂಜುಳ, ವಿಜಯಲಕ್ಷ್ಮೀ, ಭವಾನಿ, ಸಿಂಧು, ಬಿಂದು ಸೇರಿ ಐವರ ಮೇಲೆ ಎಫ್‌ಐಆರ್ ದಾಖಲಾಗಿದೆ.

error: Content is protected !!