
ಉಡುಪಿ: ಪೆಟ್ರೋಲ್ ಬಂಕ್‌ನಲ್ಲಿ ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ವಂಚಿಸಿ ಪರಾರಿಯಾಗಿದ್ದ ಮೂವರು ಆರೋಪಿಗಳನ್ನು ಶಿರ್ವ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಕಾಪು ತಾಲೂಕಿನ ಶಿರ್ವ ಕೋಟೆಕಾರ್ ನಿವಾಸಿ ಮಹಮ್ಮದ್ ರಿಯಾಜ್ (26), ಶಿರ್ವ ಭೂತಬೆಟ್ಟು ನಿವಾಸಿ ಮಹಮ್ಮದ್ ಅಫ್ರಾಜ್ (23) ಮತ್ತು ಉಡುಪಿ ಅಂಬಾಗಿಲಿನ ಮಾಂಡೋವಿ ಪ್ರಿನ್ಸ್ ಪ್ಯಾಲೇಸ್ ನಿವಾಸಿ ಆಶಿಲ್ (21) ಎಂದು ಹೆಸರಿಸಲಾಗಿದೆ.

ಆರೋಪಿಗಳಿಂದ ಬಿಳಿ ಬಣ್ಣದ ಫೋರ್ಡ್ ಇಕೋ ಸ್ಪೋರ್ಟ್ಸ್ ಕಾರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಜೂನ್ 27 ರಂದು ರಾತ್ರಿ ಕಾರ್ಕಳ ತಾಲೂಕಿನ ಕುರ್ಕಾಲು ಗ್ರಾಮದ ಸುಭಾಷ್ ನಗರದಲ್ಲಿರುವ ಪೆಟ್ರೋಲ್ ಬಂಕ್ ನಲ್ಲಿ ಆರೋಪಿಗಳು ‘ಫುಲ್ ಟ್ಯಾಂಕ್’ ಡೀಸೆಲ್ ತುಂಬಿಸುವಂತೆ ತಿಳಿಸಿದ್ದನು.

ಅದರಂತೆ ನೌಕರ 4,711.09 ರೂಪಾಯಿ ಮೌಲ್ಯದ ಡೀಸೆಲ್ ತುಂಬಿಸಿದ್ದು ಆರೋಪಿಗಳು ಕಾರ್ ಸಮೇತ ಎಸ್ಕೇಪ್ ಆಗಿದ್ದರು.
