ಮೂಡಬಿದ್ರೆ: ನಾಪತ್ತೆಯಾಗಿದ್ದ ಯುವಕನ ಮೃತದೇಹ ಪತ್ತೆ

ಮಂಗಳೂರು: ಎರಡು ದಿನಗಳಿಂದ ನಾಪತ್ತೆಯಾಗಿದ್ದ ಯುವಕನ ಮೃತದೇಹ ಮನೆಯ ಸಮೀಪದ ಶೆಡ್ ಹೊರಗೆ ಪತ್ತೆಯಾದ ಘಟನೆ ಇಂದು ಬೆಳಗ್ಗೆ ವರದಿಯಾಗಿದೆ.
ಅಲಂಗಾರು ಆಶ್ರಯ ಕಾಲೋನಿ ಸಮೀಪದ ಬಂಗೇರಬೆಟ್ಟು ನಿವಾಸಿ ಕಾರ್ತಿಕ್ ಶೆಟ್ಟಿ (34) ಮೃತಪಟ್ಟವರು. ಅವರು ಅವಿವಾಹಿತರಾಗಿದ್ದು ಹಿಟಾಚಿ ಹಾಗೂ ಜೆಎಸ್‌ಬಿ ಗುತ್ತಿಗೆದಾರರಾಗಿ ಕಾರ್ಯನಿರ್ವಹಿಸುತ್ತಿದ್ದರು ಎಂದು ತಿಳಿದು ಬಂದಿದೆ.


ಘಟನಾ ಸ್ಥಳಕ್ಕೆ ಮೂಡಬಿದ್ರೆ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.

error: Content is protected !!