
ಕಡಬ: ಬ್ಯಾಂಕ್‌ನಲ್ಲಿ ಕಡಿಮೆ ಮೌಲ್ಯದ ಚಿನ್ನಾಭರಣಗಳನ್ನು ಹೆಚ್ಚು ತೂಕ ಬರುವಂತೆ ಮಾರ್ಪಾಡು ಮಾಡಿ, ಅಡವಿಟ್ಟು ಹಣ ಲಪಟಾಯಿಸಲು ಯತ್ನಿಸುತ್ತಿದ್ದ ಇಬ್ಬರು ಕುಖ್ಯಾತ ಖದೀಮರನ್ನು ಕಡಬ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಇಲ್ಲಿನ ಕಡಬ ಪೇಟೆಯಲ್ಲಿ ಇಬ್ಬರು ವ್ಯಕ್ತಿಗಳು ಸಂಶಯಾಸ್ಪದವಾಗಿ ತಿರುಗಾಡುತ್ತಿರುವ ಬಗ್ಗೆ ಸಾರ್ವಜನಿಕರಿಂದ ಪೊಲೀಸ್ ಸಿಬ್ಬಂದಿಗೆ ಮಾಹಿತಿ ಲಭಿಸಿತ್ತು. ತಕ್ಷಣವೇ ಕಾರ್ಯಪ್ರವೃತ್ತರಾದ ಕಡಬ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ವ್ಯಕ್ತಿಗಳನ್ನು ತಡೆದು ವಿಚಾರಣೆ ನಡೆಸಿದ್ದಾರೆ. ಈ ವೇಳೆ ತಾವು ಬ್ಯಾಂಕ್‌ನಲ್ಲಿ ಸುಮಾರು 120 ಗ್ರಾಂ ಚಿನ್ನಾಭರಣಗಳನ್ನು ಅಡವಿಡಲು ಬಂದಿರುವುದಾಗಿ ಅವರು ಪೊಲೀಸರಿಗೆ ತಿಳಿಸಿದ್ದಾರೆ.

ಡಬ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಅಪರಾಧ ಕ್ರಮಾಂಕ 83/2026 ರಂತೆ, ನೂತನ ಭಾರತೀಯ ನ್ಯಾಯ ಸಂಹಿತೆಯ (BNS-2023) ಕಲಂ 318(4) ಮತ್ತು 62 ರ ಅಡಿಯಲ್ಲಿ ವಂಚನೆ ಯತ್ನ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಜಾಲದ ಹಿನ್ನೆಲೆಯ ಬಗ್ಗೆ ತನಿಖೆ ಮುಂದುವರಿದಿದೆ.
