ಪದ್ಮಶ್ರೀ ಪುರಸ್ಕೃತ ತೂಗು ಸೇತುವೆಗಳ ಸರದಾರ ಡಾ.ಗಿರೀಶ್ ಭಾರದ್ವಾಜ ಇನ್ನಿಲ್ಲ

ಸುಳ್ಯ: ತೂಗುಸೇತುವೆಗಳ ಸರದಾರ, ಪದ್ಮಶ್ರೀ ಪುರಸ್ಕೃತ ಡಾ.ಗಿರೀಶ್ ಭಾರದ್ವಾಜ ಅವರು ಇಂದು ಮುಂಜಾನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಕೆ.ವಿ.ಜಿ. ಆಸ್ಪತ್ರೆಯಲ್ಲಿ ‌ನಿಧನರಾದರು. ಅವರಿಗೆ 76 ವರ್ಷ ವಯಸ್ಸಾಗಿತ್ತು.
ಗಿರೀಶ್ ಭಾರದ್ವಾಜ ಅವರು ಕೆಲವು ದಿನಗಳ ಹಿಂದೆ ಉತ್ತರಾಖಾಂಡ ರಾಜ್ಯದ ದೇವಸ್ಥಾನಗಳಿಗೆ ಹೋಗಿ ಬಂದಿದ್ದರು.
ಹೃದಯ ಸಂಬಂಧಿ ಸಮಸ್ಯೆಯಿಂದ ಅವರು ಕೆಲ ದಿನಗಳಿಂದ ಆಸ್ಪತ್ರೆಗೆ ದಾಖಲಾಗಿದ್ದರು.


ಕಡಿಮೆ ವೆಚ್ಚದಲ್ಲಿ ಪರಿಸರ ಸ್ನೇಹಿ ತೂಗುಸೇತುವೆಗಳನ್ನು ನಿರ್ಮಿಸುವ ಮೂಲಕ ಗಮನ ಸೆಳೆದಿದ್ದರು. ಗ್ರಾಮೀಣ ಪ್ರದೇಶದಲ್ಲಿ ಇಂತಹ ನೂರಾರು ತೂಗು ಸೇತುವೆಗಳನ್ನು ನಿರ್ಮಿಸಿದ್ದರು. ಅವರ ಈ ಸೇವೆ ಗುರುತಿಸಿ ಕೇಂದ್ರ ಸರ್ಕಾರ ಅವರಿಗೆ 2017ರಲ್ಲಿ ಪದ್ಮಶ್ರೀ ಪ್ರಶಸ್ತಿ ನೀಡಿತ್ತು.

error: Content is protected !!