ಪೆರ್ಡೂರು: ಸಂಘಕ್ಕೆ ಲಕ್ಷಾಂತರ ರೂ. ವಂಚನೆ, ಪತಿ-ಪತ್ನಿ ಆರೆಸ್ಟ್!

ಉಡುಪಿ: ಪೆರ್ಡೂರು ಗ್ರಾಮದ ಪದ್ಮ ಕಮಲ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದಲ್ಲಿ ಸುಮಾರು 23 ಲಕ್ಷ ರೂಪಾಯಿ ಹಣವನ್ನು ದುರ್ಬಳಕೆ ಮತ್ತು ವಂಚನೆ ನಡೆಸಿದ ಆರೋಪದಡಿ ಒಕ್ಕೂಟದ ಮುಖ್ಯ ಪುಸ್ತಕ ಬರಹಗಾರ್ತಿ ಸುಗಂಧಿ ಮತ್ತು ಆಕೆಯ ಪತಿ ಸಂತೋಷ್ ನನ್ನು ಹಿರಿಯಡಕ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಸುಗಂಧಿ 2023ರಿಂದ 2025ರವರೆಗೆ ಒಕ್ಕೂಟದ ಮುಖ್ಯ ಪುಸ್ತಕ ಬರಹಗಾರ್ತಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಸದಸ್ಯರಿಂದ ಸಂಗ್ರಹಿಸಿದ ಸಾಲ ಮರುಪಾವತಿ ಹಣವನ್ನು ರಿಜಿಸ್ಟರ್‌ನಲ್ಲಿ ದಾಖಲಿಸಿ, ಅದನ್ನು ಒಕ್ಕೂಟದ ಬ್ಯಾಂಕ್ ಖಾತೆಗೆ ಜಮೆ ಮಾಡದೇ ದುರ್ಬಳಕೆ ಮಾಡಿರುವ ಆರೋಪ ಹೊತ್ತಿದ್ದಾರೆ. ವಿವಿಧ ಸಂಘಗಳ ಹೆಸರಿನಲ್ಲಿ ಒಕ್ಕೂಟದ ಚೆಕ್‌ಗಳಿಗೆ ಅಧ್ಯಕ್ಷರು ಹಾಗೂ ಕಾರ್ಯದರ್ಶಿಯ ನಕಲಿ ಸಹಿಗಳನ್ನು ಮಾಡಿ ಬ್ಯಾಂಕ್‌ನಿಂದ ಹಣ ಪಡೆದಿರುವುದು, ಲೆಕ್ಕಪರಿಶೋಧನೆ ವೇಳೆ ಅನುಮಾನ ಬಾರದಂತೆ ಪ್ರತ್ಯೇಕ ಸಾಲ ಖಾತೆ ಪುಸ್ತಕಗಳನ್ನು ಸೃಷ್ಟಿಸಿ ನಿರ್ವಹಿಸಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಈ ಮೂಲಕ ಒಕ್ಕೂಟಕ್ಕೆ ಸುಮಾರು 23 ಲಕ್ಷ ನಷ್ಟ ಉಂಟುಮಾಡಿದ್ದಾಗಿ ದೂರಿನಲ್ಲಿ ವಿವರಿಸಲಾಗಿದೆ.


ಹಿರಿಯಡಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

error: Content is protected !!