ವಯನಾಡ್ ಭೂಕುಸಿತ: ಅವಶೇಷಗಳಡಿ ಸಿಲುಕಿರುವ ಕಾರ್ಮಿಕರಿಗೆ ಶೋಧಕಾರ್ಯ

ಕೇರಳ‌: ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದ ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಡಿ ಬಳಿಯ ಕಲ್ಲಾಡಿ ಎಂಬಲ್ಲಿ ಇಂದು ಮುಂಜಾನೆ ಭಾರಿ ಭೂಕುಸಿತ ಸಂಭವಿಸಿದ ವರದಿಯಾಗಿದೆ. ಹಲವರು ಅವಶೇಷಗಳಡಿಯಲ್ಲಿ ಸಿಲುಕಿದ್ದಾರೆ ಎನ್ನಲಾಗುತ್ತಿದೆ.

ವಯನಾಡ್ ಹಾಗೂ ಮಲಪ್ಪುರಂ ಜಿಲ್ಲೆಗಳನ್ನು ಸಂಪರ್ಕಿಸುವ ಸುರಂಗ ಮಾರ್ಗದ ಕಾಮಗಾರಿ ನಡೆಯುತ್ತಿದ್ದ ಸ್ಥಳದಲ್ಲಿ ಭೂಕುಸಿತ ಉಂಟಾಗಿದೆ. ಸುರಂಗದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರು ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಈ ಸುರಂಗದ ನಿರ್ಮಾಣ ಕಾರ್ಯ ಎರಡೂ ಕಡೆಯಿಂದ ನಡೆಯುತ್ತಿದೆ.

error: Content is protected !!