
ಕುಂದಾಪುರ: ಕೋಟೇಶ್ವರ ಸಮೀಪದ ಪೈಂಟಿಂಗ್ ಅಂಗಡಿಯಲ್ಲಿ ಸೇಲ್ಸ್ ಮ್ಯಾನೇಜರ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಭರತ್ ಶೆಟ್ಟಿ(33) ಕೆಲಸದ ನಿಮಿತ್ತ ಕೋಟೇಶ್ವರ ಕಡೆಯಿಂದ ಕುಂದಾಪುರ ಕಡೆಗೆ ಬೈಕಿನಲ್ಲಿ ಪ್ರಯಾಣಿಸುತ್ತಿದ್ದರು. ಈ ಸಂದರ್ಭ ಬಾಲ ಮುರುಗನ್ ಚಲಾಯಿಸುತ್ತಿದ್ದ ಲಾರಿ ಬೈಕಿಗೆ ಡಿಕ್ಕಿ ಹೊಡೆದಿದೆ.ಅಪಘಾತದ ಪರಿಣಾಮ ಭರತ್ ರಸ್ತೆಗೆ ಬಿದ್ದಿದ್ದರು.

ಚಿಕಿತ್ಸೆಗಾಗಿ ಹತ್ತಿರದ ಎನ್.ಆರ್ ಆಚಾರ್ಯ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ವೈದ್ಯರು ಪರೀಕ್ಷಿಸಿ, ಮೃತ ಪಟ್ಟಿರುವುದಾಗಿ ದೃಢೀಕರಿಸಿದ್ದಾರೆ.
ಭರತ್ ಶೆಟ್ಟಿ ಅವರಿಗೆ ಒಂದು ವರ್ಷದ ಹಿಂದೆ ಮದುವೆಯಾಗಿದ್ದು, ಪತ್ನಿ ಹಾಗೂ ಕುಟುಂಬದವರನ್ನು ಅಗಲಿದ್ದಾರೆ. ಕುಂದಾಪುರ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
