ಸುರತ್ಕಲ್: ಇಲ್ಲಿನ ಮುಕ್ಕ ಶ್ರೀನಿವಾಸ ಆಸ್ಪತ್ರೆಯ ಕಟ್ಟಡ ಕಾಮಗಾರಿಯಲ್ಲಿ ತೊಡಗಿದ್ದ 8ಮಂದಿ ಬಾಂಗ್ಲಾದೇಶದ ಪ್ರಜೆಗಳನ್ನು ಸುರತ್ಕಲ್ ಪೊಲೀಸರು ಇಂದು ಮುಂಜಾನೆ ವಶಕ್ಕೆ ಪಡೆದುಕೊಂಡಿದ್ದಾರೆ. ಇವರಲ್ಲಿ ಆಧಾರ್ ಕಾರ್ಡ್ ಸಹಿತ ಯಾವುದೇ ದಾಖಲೆ ಪತ್ರಗಳು ಇರಲಿಲ್ಲ ಎನ್ನಲಾಗಿದೆ.

ಬಾಂಗ್ಲಾದೇಶದ ಏಜೆಂಟ್ ಮುಸ್ತಕೀಮ್ ಎಂಬಾತನೊಂದಿಗೆ ಮಂಗಳೂರಿಗೆ ಆಗಮಿಸಿದ್ದರು ಎಂದು ಹೇಳಲಾಗಿದ್ದು ಕಾಟಿಪಳ್ಳ ಮೂಲದ ಕಟ್ಟಡ ಗುತ್ತಿಗೆದಾರ ನಿಸಾರ್ ಎಂಬಾತನೊಂದಿಗೆ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭಿಸಬೇಕಿದೆ.

