ಬಾಂಗ್ಲಾದೇಶಿಗರನ್ನು ಹೊರಹಾಕಲು ಕೇಂದ್ರದ ಜೊತೆ ರಾಜ್ಯ ಸರಕಾರ ಕೈಜೋಡಿಸಬೇಕು -ಡಾ.ಭರತ್ ಶೆಟ್ಟಿ ವೈ.

ಸುರತ್ಕಲ್: “ಮಂಗಳೂರಿನ ಸುರತ್ಕಲ್ ಸಮೀಪದ ಮುಕ್ಕದಲ್ಲಿ 8 ಮಂದಿ ಬಾಂಗ್ಲಾದೇಶಿಗಳು ಕೂಲಿ ಕಾರ್ಮಿಕರ ಸೋಗಿನಲ್ಲಿ ಅಕ್ರಮವಾಗಿ ನೆಲೆಸಿ, ಅನಧಿಕೃತ ಆಧಾರ್ ಕಾರ್ಡ್ ಮಾಡಿಸಿಕೊಂಡಿರುವ ಘಟನೆ ರಾಜ್ಯದ ಭದ್ರತೆಗೆ ಎಚ್ಚರಿಕೆಯ ಗಂಟೆಯಾಗಿದೆ. ಇಂತಹ ಅಕ್ರಮ ನುಸುಳುವಿಕೆಗಳನ್ನು ಗಂಭೀರವಾಗಿ ಪರಿಗಣಿಸದಿದ್ದರೆ ಮುಂದೆ ಇದರ ಪರಿಣಾಮ ಭೀಕರವಾಗಿರುತ್ತದೆ.
ಬಾಂಗ್ಲಾದೇಶಗರನ್ನು ಹೊರಹಾಕಲು ಕೇಂದ್ರ ಸರಕಾರದ ಜೊತೆ ರಾಜ್ಯ ಸರಕಾರ ಕೈಜೋಡಿಸಬೇಕು ಎಂದು ಶಾಸಕರಾದ ಡಾ. ಭರತ್ ಶೆಟ್ಟಿ ಸರಕಾರವನ್ನು ಒತ್ತಾಯಿಸಿದ್ದಾರೆ.

ದುರದೃಷ್ಟವಶಾತ್ ರಾಜ್ಯದ ಗೃಹ ಮಂತ್ರಿ ಪ್ರಿಯಾಂಕ್ ಖರ್ಗೆ ಅವರು ಕೇವಲ RSS, RSS ಎಂದು ಕನವರಿಸುವ ಬದಲು ಮಾಡುವ ಬದಲು ದೇಶಕ್ಕೆ ನೇರ ಬೆದರಿಕೆಯಾಗಿರುವ ಇಂತಹ ಪ್ರಕರಣಗಳನ್ನು ಪತ್ತೆಹಚ್ಚುವತ್ತ ಗಮನ ಕೊಡಬೇಕು.
ಈ ಬಾಂಗ್ಲಾದೇಶಿಗಳಿಗೆ ಅನಧಿಕೃತ ಆಧಾರ ಕಾರ್ಡ್ ಸೇರಿದಂತೆ ಎಲ್ಲಾ ಸೌಲಭ್ಯ ಒದಗಿಸಿಕೊಟ್ಟ ಏಜೆಂಟ್‌ಗಳು ಮತ್ತು ಅಧಿಕಾರಿಗಳ ಮೇಲೆ ಕಠಿಣ ಶಿಕ್ಷೆ ವಿಧಿಸಲು ಸರ್ಕಾರ ಕೂಡಲೇ ಮುಂದಾಗಬೇಕು.

ಇಲ್ಲದಿದ್ದರೆ ಕಾಂಗ್ರೆಸ್ ಸರ್ಕಾರದ ವೋಟ್ ಬ್ಯಾಂಕ್ ರಾಜಕಾರಣಕ್ಕೆ ಕರಾವಳಿಯ ಜನರ ಜೀವ ಮತ್ತು ಸುರಕ್ಷತೆ ಬಲಿಯಾಗುತ್ತದೆ.
ರಾಜ್ಯದ ಗೃಹ ಸಚಿವಾಲಯ ಇದರ ಹಿಂದಿರುವ ಕಾಣದ ಕೈಗಳನ್ನು ಪತ್ತೆ ಹಚ್ಚಿ ಗಂಭೀರ ಕ್ರಮವನ್ನು ಕೈಗೊಳ್ಳಬೇಕು ಎಂದು ಶಾಸಕ ಭರತ್ ಶೆಟ್ಟಿ ಒತ್ತಾಯಿಸಿದ್ದಾರೆ.

error: Content is protected !!