
ಬೆಂಗಳೂರು: ಸಾರ್ವಜನಿಕ ಶಿಕ್ಷಣ ಇಲಾಖೆ ಕರ್ನಾಟಕ ಸರಕಾರ ಇದರ ಜಂಟಿ ನಿರ್ದೇಶಕರಾದ ಗೋವಿಂದ ಮಡಿವಾಳ ಅವರು ಮಧ್ಯ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಗೆ ಬೇಟಿ ನೀಡಿದರು.
ಶಾಲೆಯ ಅಭಿವೃದ್ಧಿ ಚಟುವಟಿಕೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು ಇಲಾಖೆಯ ವತಿಯಿಂದ ಶಾಲೆಗೆ ಸಂಪೂರ್ಣ ಸಹಕಾರ ನೀಡುವ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ವಿದ್ಯಾನಿಧಿ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಪುಷ್ಷರಾಜ್ ಶೆಟ್ಟಿ, ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಅನಿಲ್ ಸಾಲ್ಯಾನ್, ಸದಸ್ಯರಾದ ಹರೀಶ್ ಭಂಡಾರಿ, ಮುಖ್ಯ ಶಿಕ್ಷಕಿ ಜೇನ್ ಡಿಸೋಜಾ ಉಪಸ್ಥಿತರಿದ್ದರು.
