“ಅಕ್ರಮ ವಲಸಿಗರನ್ನು ತಡೆಯಲು ಸರ್ಕಾರ, ಪೊಲೀಸ್ ಇಲಾಖೆ ಹಾಗೂ ಸಾರ್ವಜನಿಕರ ಸಹಕಾರ ಅಗತ್ಯ“ -ಭರತ್ ರಾಜ್ ಕೃಷ್ಣಾಪುರ

ಸುರತ್ಕಲ್ ಬಳಿಯ ಮುಕ್ಕದಲ್ಲಿ ಇತ್ತೀಚಿಗೆ ಎಂಟು ಮಂದಿ ಅಕ್ರಮ ಬಾಂಗ್ಲಾದೇಶಿ ವಲಸಿಗರನ್ನು ಪತ್ತೆ ಹಚ್ಚಲಾಗಿದೆ. ಇದೀಗ ಕೋಡಿಕಲ್ ಪ್ರದೇಶದಲ್ಲಿಯೂ 11 ಮಂದಿ ಅಕ್ರಮ ಬಾಂಗ್ಲಾದೇಶಿ ವಲಸಿಗರನ್ನು ಪತ್ತೆ ಹಚ್ಚಲಾಗಿದೆ. ಈ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ನಡೆಸಿದ ಪೊಲೀಸ್ ಇಲಾಖೆಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.
ವಿಶೇಷವಾಗಿ ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಸುಧೀರ್ ಕುಮಾರ್ ರೆಡ್ಡಿ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.
ಇಷ್ಟಕ್ಕೇ ಕಾರ್ಯಾಚರಣೆ ನಿಲ್ಲದೆ, ಇನ್ನಷ್ಟು ವಿಶೇಷ ಟಾಸ್ಕ್ ಫೋರ್ಸ್‌ಗಳನ್ನು ರಚಿಸಿ ನಗರದಲ್ಲಿ ಸಮಗ್ರ ಪರಿಶೀಲನೆ ನಡೆಸಬೇಕು. ಕಟ್ಟಡ ನಿರ್ಮಾಣ ಕ್ಷೇತ್ರ, ಕಾರ್ಮಿಕ ವಲಯ ಹಾಗೂ ಇತರ ಸ್ಥಳಗಳಲ್ಲಿ ಅಕ್ರಮವಾಗಿ ನೆಲೆಸಿರುವ ವಲಸಿಗರ ಬಗ್ಗೆ ಮಾಹಿತಿ ಕೇಳಿಬರುತ್ತಿದೆ.
ಶೇಷ ಟಾಸ್ಕ್ ಫೋರ್ಸ್ ರಚಿಸಿ, ಅಕ್ರಮ ವಲಸಿಗರನ್ನು ಪತ್ತೆಹಚ್ಚುವ ಕಾರ್ಯವನ್ನು ಇನ್ನಷ್ಟು ತೀವ್ರಗೊಳಿಸಬೇಕು.


ದೇಶದ ಭದ್ರತೆಯ ದೃಷ್ಟಿಯಿಂದ ಅಕ್ರಮ ವಲಸೆಯನ್ನು ತಡೆಗಟ್ಟುವುದು ಅತ್ಯಂತ ಮುಖ್ಯ. ಈ ನಿಟ್ಟಿನಲ್ಲಿ ಸರ್ಕಾರ, ಪೊಲೀಸ್ ಇಲಾಖೆ ಹಾಗೂ ಸಾರ್ವಜನಿಕರು ಪರಸ್ಪರ ಸಹಕಾರದೊಂದಿಗೆ ಕಾರ್ಯನಿರ್ವಹಿಸಬೇಕು ಎಂದು ಬಿಜೆಪಿ ಯುವಮೋರ್ಚಾ ದಕ್ಷಿಣಕನ್ನಡ ಪ್ರಧಾನ ಕಾರ್ಯದರ್ಶಿ ಭರತ್ ರಾಜ್ ಕೃಷ್ಣಾಪುರ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

error: Content is protected !!