
ಮಂಗಳೂರು: ಇಂದು ಸಂಜೆ 6 ಗಂಟೆಯ ಸುಮಾರಿಗೆ ಬಿಸಿ ರೋಡ್ KSRTC ಹೊಸ ಬಸ್ ಸ್ಟ್ಯಾಂಡ್ ಬಳಿ ಬಸ್ ಗಾಗಿ ಕಾಯುತ್ತಿದ್ದ ಸುಮಾರು 21-25 ವರ್ಷದ ಯುವತಿಗೆ ಯುವಕನೋರ್ವ ಹರಿತವಾದ ಆಯುಧದಿಂದ ಗಂಭೀರವಾಗಿ ಹಲ್ಲೆ ನಡೆಸಿ ಪರಾರಿಯಾಗಿರುತ್ತಾನೆ.

ತಕ್ಷಣ ಸದ್ರಿ ಯುವತಿಯನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ಬಂಟ್ವಾಳ ನಗರ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ವಿಚಾರಣೆಯ ಬಳಿಕ ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ. ಯುವತಿಯನ್ನು ಕಕ್ಯಪದವು ಮೂಲದವಳು ಎಂದು ಹೇಳಲಾಗಿದ್ದು ಸ್ಥಿತಿ ಚಿಂತಾಜನಕವಾಗಿದೆ.
