
ಶಿವಮೊಗ್ಗ: ಕೊಡಚಾದ್ರಿಗೆ ಚಾರಣಕ್ಕೆ ಬಂದಿದ್ದ ಬೆಂಗಳೂರಿನ ಯುವಕನೊಬ್ಬ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಡೆದಿದೆ.
ಮೃತರನ್ನು ಬೆಂಗಳೂರಿನ ಯಲಹಂಕ ನಿವಾಸಿ ಶ್ರೀಕಾಂತ್ (28) ಎಂದು ಗುರುತಿಸಲಾಗಿದೆ. ಶ್ರೀಕಾಂತ್ ಅವರು ಸ್ನೇಹಿತರೊಂದಿಗೆ ಜುಲೈ 17ರಂದು ಕೊಡಚಾದ್ರಿ ಪ್ರವಾಸಕ್ಕೆ ಆಗಮಿಸಿದ್ದು, ಸಂಪೆಕಟ್ಟೆ ಸಮೀಪದ ಕಟ್ಟಿನಹೊಳೆ ಗ್ರಾಮದ ಸ್ನೇಹಿತರ ಮನೆಯಲ್ಲಿ ತಂಗಿದ್ದರು. ರಾತ್ರಿ ಏಕಾಏಕಿ ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದಾರೆ.

ಕೂಡಲೇ ಸ್ನೇಹಿತರು ಅವರನ್ನು ಹೊಸನಗರ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದು, ಪರೀಕ್ಷಿಸಿದ ವೈದ್ಯರು ಅವರು ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ.
