BREAKING NEWS🔥🔥 ಮೂಡಬಿದ್ರೆ ಬಸ್ ನಿಲ್ದಾಣದಲ್ಲಿ ಯುವಕನ ತಲ್ವಾರ್ ಶೋ, ಆರೆಸ್ಟ್!!

ಮೂಡುಬಿದಿರೆ: ಇಲ್ಲಿನ ಬಸ್ ನಿಲ್ದಾಣದಲ್ಲಿ ತಲ್ವಾರ್ ಹಿಡಿದು ಯುವಕನೊಬ್ಬ ಸಾರ್ವಜನಿಕರಲ್ಲಿ ಆತಂಕದ ವಾತಾವರಣ ಸೃಷ್ಟಿಸಿದ ಘಟನೆ ಇಂದು ಸಂಜೆ ನಡೆದಿದೆ. ಬಸ್ ನಿಲ್ದಾಣದಲ್ಲಿರುವ ಮೊಬೈಲ್ ಅಂಗಡಿಗೆ ತೆರಳಿದ ಆರೋಪಿ, ಅಲ್ಲಿದ್ದ ಯುವಕರಿಗೆ ಮಾರಕಾಯುಧ ಬೀಸಿ ಮೊಬೈಲ್ ನೀಡುವಂತೆ ಬೆದರಿಕೆ ಹಾಕಿದ್ದು ಮೊಬೈಲ್ ನೀಡಲು ನಿರಾಕರಿಸಿದ ವೇಳೆ ಹಲ್ಲೆ ನಡೆಸಿದ ಆರೋಪ ಕೇಳಿಬಂದಿದೆ.

ಘಟನೆಯಿಂದ ಬಸ್ ನಿಲ್ದಾಣದಲ್ಲಿ ಕೆಲಕಾಲ ಭಯದ ವಾತಾವರಣ ನಿರ್ಮಾಣವಾಗಿದ್ದು, ಸಾರ್ವಜನಿಕರು ಆತಂಕಕ್ಕೊಳಗಾದರು.
ಯುವಕನನ್ನು ಸ್ಥಳಕ್ಕೆ ಧಾವಿಸಿದ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

error: Content is protected !!