ಪತ್ನಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ

ಮೈಸೂರು: ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಕೊಂದು ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಮನಕಲಕುವ ಘಟನೆ ಹುಣಸೂರಿನಲ್ಲಿ ನಡೆದಿದೆ.
ಮೃತರನ್ನು ಹರೀಶ್ (49) ಪತ್ನಿ ನಿಶ್ಚಿತ (36) ಮತ್ತು 13 ಹಾಗೂ 6 ವರ್ಷ ಪ್ರಾಯದ ಇಬ್ಬರು ಮಕ್ಕಳು ಎಂದು ಗುರುತಿಸಲಾಗಿದೆ. ಹೆಂಡತಿ ಮಕ್ಕಳ ಬಾಯಿಗೆ ಪ್ಲಾಸ್ಟರ್ ಅಂಟಿಸಿ, ಉಸಿರುಗಟ್ಟಿಸಿ ಕೊಲೆ ಮಾಡಿರುವ ಹರೀಶ್​, ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.


ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಈ ದುರಂತ ನಡೆದಿದೆ. ಕಳೆದ ಮೂರು ದಿನಗಳ ಹಿಂದೆ ತಮ್ಮ ತಾಯಿಯನ್ನು ಹರೀಶ್​ ಅಜ್ಜಿ ಮನೆಗೆ ಕಳುಹಿಸಿದ್ದರು ಎಂದು ತಿಳಿದುಬಂದಿದೆ. ಸ್ಥಳಕ್ಕೆ ಹುಣಸೂರು ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

error: Content is protected !!