
ಉಡುಪಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಗ್ಗೆ ಅವಹೇಳನಕಾರಿಯಾಗಿ ದ್ವೇಷ ಭಾಷಣ ಮಾಡಿದ ಆರೋಪದಲ್ಲಿ ಉಡುಪಿ ಶಾಸಕ ಸುವರ್ಣ ವಿರುದ್ಧ ಕಾಂಗ್ರೆಸ್ ಮುಖಂಡರು ಉಡುಪಿ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ
ಜಿಲ್ಲಾ ಬಿಜೆಪಿ ವತಿಯಿಂದ ನಿನ್ನೆ ಉಡುಪಿ ನಗರದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಯಶ್ ಪಾಲ್ ಸುವರ್ಣ, ಬಾಬರಿ ಮಸೀದಿಯಂತೆ ರಾಹುಲ್ ಗಾಂಧಿ ವಂಶವನ್ನು ಧ್ವಂಸ ಮಾಡುವುದಾಗಿ ಭಾಷಣ ಮಾಡಿದ್ದರು.
ನಿನ್ನೆ ಮಧ್ಯರಾತ್ರಿ ಉಡುಪಿ ನಗರ ಪೊಲೀಸ್ ಠಾಣೆಗೆ ತೆರಳಿದ ಕಾಂಗ್ರೆಸ್ ಮುಖಂಡರು ನಗರ ಠಾಣೆಯ ಪೊಲೀಸ್ ನಿರೀಕ್ಷಕ ಮಹೇಶ್ ಪ್ರಸಾದ್ ಅವರಿಗೆ ದೂರು ಸಲ್ಲಿಸಿದ್ದಾರೆ. ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವರು ನೀಡಿದ ದೂರದಂತೆ ಶಾಸಕ ಯಶ್ ಪಾಲ್ ವಿರುದ್ಧ ಪ್ರಕರಣ ದಾಖಲಾಗಿದೆ.