ಪಂಜ: ನವಜ್ಯೋತಿ ಮಹಿಳಾ ಮಂಡಳಿಯ ವತಿಯಿಂದ ‘ಆಟಿಡೊಂಜಿ ಕೂಟ’ ವೈಭವ

ಪಂಜ: ಇಲ್ಲಿನ ನವಜ್ಯೋತಿ ಮಹಿಳಾ ಮಂಡಳಿ (ಕೊಯಿಕುಡೆ) ಇದರ ವಾರ್ಷಿಕ ಮಹಾಸಭೆ ಹಾಗೂ ತುಳುನಾಡಿನ ಸಾಂಸ್ಕೃತಿಕ ಪರ್ವ ‘ಆಟಿಡೊಂಜಿ ಕೂಟ’ ಕಾರ್ಯಕ್ರಮವು ಇತ್ತೀಚೆಗೆ ಸಂಭ್ರಮದಿಂದ ಜರುಗಿತು.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಮಧ್ಯ ಶಾಲೆಯ ಶಿಕ್ಷಕಿ ಶ್ವೇತಾ ಮನೋಜ್ ಪೂಜಾರಿ ಅವರು, ತುಳುನಾಡಿನ ಜಾನಪದ ಕ್ರೀಡೆಯಾದ ಚೆನ್ನಮಣೆ ಆಡುವ ಮೂಲಕ ಕಾರ್ಯಕ್ರಮವನ್ನು ಅಧಿಕೃತವಾಗಿ ಉದ್ಘಾಟಿಸಿ ಶುಭ ಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಡಳಿಯ ಅಧ್ಯಕ್ಷೆ ಮಮತಾ ಶೆಟ್ಟಿ ಪಂಜ ವಹಿಸಿದ್ದರು. ವೇದಿಕೆಯಲ್ಲಿ ಮಂಡಳಿಯ ಉಪಾಧ್ಯಕ್ಷೆ ತಾರಾ ಶೆಟ್ಟಿ, ಪದಾಧಿಕಾರಿಗಳಾದ ನಿಶ್ವಿತ ದೇವಾಡಿಗ, ಮಮತಾ ದೇವಾಡಿಗ, ಕುಶಲ ಶೇಖರ್ ಹಾಗೂ ಮಂಡಳಿಯ ಸರ್ವ ಸದಸ್ಯರು ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಮೆರುಗು ನೀಡಿದರು.

ಆರಂಭದಲ್ಲಿ ಮಂಡಳಿಯ ಅಧ್ಯಕ್ಷೆ ಮಮತಾ ಶೆಟ್ಟಿ ಸರ್ವರನ್ನೂ ಸ್ವಾಗತಿಸಿದರು. ಕುಶಲ ಶೇಖರ್ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರೂಪಿಸಿದರೆ, ತಾರಾ ಶೆಟ್ಟಿ ವಂದನಾರ್ಪಣೆ ಮಾಡಿದರು.

error: Content is protected !!