
ಕುಂದಾಪುರ: ನಸುಕಿನ ಜಾವ ವ್ಯಕ್ತಿಯೊಬ್ಬರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಇಲ್ಲಿನ ಚರ್ಚ್ ರಸ್ತೆಯಲ್ಲಿ ನಡೆದಿದೆ.
ಕಚ್ಚೂರು ನಿವಾಸಿ ಐವನ್ ರಿಚರ್ಡ್ ಮಸ್ಕರೇನಸ್ (45) ಹತ್ಯೆಗೀಡಾದ ವ್ಯಕ್ತಿ.
ಐವನ್ ರಿಚರ್ಡ್ ಮೊದಲ ಪತ್ನಿಯನ್ನು ತೊರೆದು, ಬಾರ್ಕೂರು ಮೂಲದ ಮಹಿಳೆಯೊಂದಿಗೆ ವಾಸಿಸುತ್ತಿದ್ದರು ಎನ್ನಲಾಗಿದೆ. ನಸುಕಿನ 3:30ರ ಸುಮಾರಿಗೆ ಮಹಿಳೆಯೊಂದಿಗೆ ಕಾರಿನಲ್ಲಿ ಕುಂದಾಪುರದ ಚರ್ಚ್ ರಸ್ತೆಗೆ ಬಂದಿddu ಚರ್ಚ್ ಎದುರು ಅಪರಿಚಿತ ವ್ಯಕ್ತಿಯೊಬ್ಬ ಪಿಸ್ತೂಲ್ ನಿಂದ ಅವರ ಮೇಲೆ ಗುಂಡಿನ ದಾಳಿ ನಡೆಸಿದ್ದಾನೆ ಎನ್ನಲಾಗಿದೆ. ಗುಂಡೇಟಿನಿಂದ ತೀವ್ರ ರಕ್ತಸ್ರಾವಗೊಂಡ ಐವನ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಸ್ಥಳಕ್ಕೆ ಕುಂದಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ವ್ಯವಹಾರ ವೈಷಮ್ಯ ಇರಬಹುದು ಎಂದು ಶಂಕಿಸಲಾಗಿದೆ.