ಕುಂದಾಪುರ: ಶೂಟೌಟ್ ಆರೋಪಿ ಪೊಲೀಸ್ ವಶಕ್ಕೆ!


ಕುಂದಾಪುರ:
  ಶುಕ್ರವಾರ ನಸುಕಿನ ವೇಳೆ ನಡೆದ ಶೂಟೌಟ್ ಪ್ರಕರಣದ ಆರೋಪಿಯನ್ನು ಉಡುಪಿ ಜಿಲ್ಲಾ ಎಸ್ಪಿ ನೇತೃತ್ವದಲ್ಲಿ ರಚಿಸಿದ ಪೊಲೀಸರ ವಿಶೇಷ ತಂಡ ಬಂಧಿಸಿದೆ. ಮೂಲತಃ ಹೆಮ್ಮಾಡಿ ನಿವಾಸಿ ಕುಂದಾಪುರದ ಫ್ಲ್ಯಾಟ್‌ವೊಂದರಲ್ಲಿ ವಾಸವಿರುವ ಡೆರಿಕ್ ಕ್ರಾಸ್ತಾ (55) ಬಂಧಿತ ಆರೋಪಿ.

ಆರೋಪಿಯನ್ನು ಭಟ್ಕಳದ ಬೆಳಕೆ ಹೇರಬುಡಿಕೆ ಎಂಬಲ್ಲಿ ಬಂಧಿಸಲಾಗಿದೆ ಎಂದು ಎಸ್ಪಿ ಮಾಹಿತಿ ನೀಡಿದ್ದಾರೆ.

error: Content is protected !!