
ಮಲ್ಪೆ: ಪೊಲೀಸ್ ಠಾಣಾ ವ್ಯಾಪ್ತಿಯ ಕಲ್ಮಾಡಿಯಲ್ಲಿ 27 ವರ್ಷದ ಯುವ ಮಾಡೆಲ್ ಕೃತಿ ಬಂಗೇರ ಮನೆಯ ಬೆಡ್‌ರೂಮ್‌ನಲ್ಲಿ ವೇಲ್‌ನಿಂದ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಾಡೆಲಿಂಗ್ ರಂಗದಲ್ಲಿ ಗುರುತಿಸಿಕೊಂಡಿದ್ದ ಇವರು, ಕಡಿಯಾಳಿಯ ಖಾಸಗಿ ಹೋಟೆಲೊಂದರಲ್ಲಿ ಉದ್ಯೋಗದಲ್ಲಿದ್ದು, ಕಳೆದ ಐದು ತಿಂಗಳುಗಳಿಂದ ಕೆಲಸಕ್ಕೆ ತೆರಳದೆ ತಾಯಿ ಮತ್ತು ಸಹೋದರಿಯೊಂದಿಗೆ ಕಲ್ಮಾಡಿಯ ಮನೆಯಲ್ಲೇ ನೆಲೆಸಿದ್ದರು. ಮೃತರ ಸಹೋದರಿ ನೀಡಿದ ದೂರಿನ ಮೇರೆಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.