
ಮಂಗಳೂರು: ಚಲನಚಿತ್ರ ನಟ ಹಾಗೂ ಪ್ರಗತಿಪರ ಚಿಂತಕ ಚೇತನ್ ಅಹಿಂಸಾ ಅವರು ಶನಿವಾರ ಮಂಗಳೂರಿಗೆ ಆಗಮಿಸಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಅಧ್ಯಯನ ಹಾಗೂ ಅಭಿವೃದ್ಧಿ ಟ್ರಸ್ಟ್‌ನ ಅಧ್ಯಕ್ಷರನ್ನು ಭೇಟಿ ಮಾಡಿದರು.
ಈ ಸಂದರ್ಭದಲ್ಲಿ ಟ್ರಸ್ಟ್ ಅಧ್ಯಕ್ಷ ಮೋಹನಾಂಗಯ್ಯ ಸ್ವಾಮಿ ಅವರು ಚೇತನ್ ಅಹಿಂಸಾ ಅವರನ್ನು ಆತ್ಮೀಯವಾಗಿ ಸ್ವಾಗತಿಸಿ ಸನ್ಮಾನಿಸಿದರು. ಸಮುದಾಯದ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಅಭಿವೃದ್ಧಿ ಸೇರಿದಂತೆ ವಿವಿಧ ವಿಚಾರಗಳ ಕುರಿತು ಈ ಸಂದರ್ಭದಲ್ಲಿ ಚರ್ಚೆ ನಡೆಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಕೈಗಾರಿಕೋದ್ಯಮಿಗಳ ಸಂಘದ ಕಾರ್ಯದರ್ಶಿ ಹಾಗೂ ಉದ್ಯಮಿ ನಾರಾಯಣ ಸ್ವಾಮಿ, ಕಾಂಗ್ರೆಸ್ ಮುಖಂಡ ಹ್ಯಾರಿ ಡಿಸೋಜಾ, ಉದ್ಯಮಿ ಶಂಕರ್ ಶೆಟ್ಟಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.