
ಮಂಗಳೂರು: ಹೊಂಡಾ ಡಿಯೋ ಸ್ಕೂಟರ್ ಕಳವು ಮಾಡಿದ ಆರೋಪದ ಮೇಲೆ ಮಹಮ್ಮದ್ ಫೈಜಲ್ ಅಲಿಯಾಸ್ ತೋಟ ಫೈಜಲ್ (40) ಎಂಬಾತನನ್ನು ಉರ್ವಾ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಉರ್ವಾ ಪೊಲೀಸ್ ಠಾಣಾ ವ್ಯಾಪ್ತಿಯ ಕೋಡಿಕ್ಕಲ್‌ನಲ್ಲಿ ಮನೆಯ ಎದುರು ನಿಲ್ಲಿಸಿದ್ದ KA-19-EB-2226 ನೋಂದಣಿ ಸಂಖ್ಯೆಯ ಹೊಂಡಾ ಡಿಯೋ ಸ್ಕೂಟರ್ ಕಳವಾಗಿತ್ತು. ಸುತ್ತಮುತ್ತಲಿನ ಸಿ.ಸಿ. ಕ್ಯಾಮೆರಾಗಳನ್ನು ಪರಿಶೀಲಿಸಿದ್ದು ಈ ವೇಳೆ ಆರೋಪಿಯ ಚಹರೆ ಲಭ್ಯವಾಗಿತ್ತು.
