
ಮಂಗಳೂರು: ಹದಿನೈದು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಪ್ರಕರಣವೊಂದರ ಆರೋಪಿಯನ್ನು ಮಂಗಳೂರು ನಗರ ಮಹಿಳಾ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಮೂಡಬಿದ್ರೆ ಹಂಡೇಲ ನಿವಾಸಿ ಸೆಫಿಯಾ (53) ಬಂಧಿತ ಆರೋಪಿ. ಈಕೆ ಮಂಗಳೂರು ನಗರ ಮಹಿಳಾ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 15 ವರ್ಷಗಳಿಂದ ಪೊಲೀಸರ ಕೈಗೆ ಸಿಗದೆ ತಲೆಮರೆಸಿಕೊಂಡಿದ್ದಳು ಎಂದು ವರದಿಯಾಗಿದೆ.
ಪ್ರಕರಣದ ತನಿಖೆ ಮುಂದುವರಿಸಿದ ಮಂಗಳೂರು ನಗರ ಮಹಿಳಾ ಪೊಲೀಸ್ ಠಾಣೆಯ ಅಧಿಕಾರಿ ಹಾಗೂ ಸಿಬ್ಬಂದಿ ಆರೋಪಿಯ ಕುರಿತು ಮಾಹಿತಿ ಕಲೆಹಾಕಿ, ಆಕೆಯನ್ನು ಪತ್ತೆಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪತ್ತೆಹಚ್ಚಿ ಬಂಧಿಸಿದ ಮಹಿಳಾ ಪೊಲೀಸ್ ಠಾಣೆಯ ಅಧಿಕಾರಿ ಹಾಗೂ ಸಿಬ್ಬಂದಿಯ ಕಾರ್ಯಾಚರಣೆಗೆ ಹಿರಿಯ ಪೊಲೀಸ್ ಅಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.