
ಮಂಗಳೂರು: ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ಇದರ ವಿದ್ಯಾರ್ಥಿ ಸಂಘಟನೆಯಾದ ನ್ಯಾಷನಲ್ ಸ್ಟೂಡೆಂಟ್ ಯೂನಿಯನ್ ಆಫ್ ಇಂಡಿಯಾ (NSUI) ಮಲ್ಲೂರು ವಲಯ ಅಧ್ಯಕ್ಷರಾಗಿ ಮುಹಮ್ಮದ್ ಸಮಾನ್ ಆಯ್ಕೆಯಾಗಿದ್ದಾರೆ. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಆಲಿ ಶಿಫಾರಸು ಮೇರೆಗೆ ಆಯ್ಕೆ ನಡೆದಿದೆ.
ಇಂಜಿನಿಯರಿಂಗ್ ವಿದ್ಯಾರ್ಥಿಯಾಗಿರುವ ಮುಹಮ್ಮದ್ ಸಮಾನ್ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿದ್ದು, ವಲಯ ಮಟ್ಟದಲ್ಲಿ ವಿದ್ಯಾರ್ಥಿ ಸಂಘಟನೆಯನ್ನು ಗಟ್ಟಿಗೊಳಿಸಿ ಪಕ್ಷ ಸಂಘಟಿಸುವ ಮಹತ್ತರ ಜವಾಬ್ದಾರಿಯನ್ನು ವಹಿಸಿಕೊಡಲಾಗಿದೆ.
