ಬ್ರಹ್ಮಾವರ: ಚಲಿಸುತ್ತಿದ್ದ ಬಸ್ ಬೆಂಕಿಗಾಹುತಿ, 7 ಪ್ರಯಾಣಿಕರು ಪಾರು!

ಉಡುಪಿ: ಚಲಿಸುತ್ತಿದ್ದ ಖಾಸಗಿ ಬಸ್ ಒಂದರಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು, ಕ್ಷಣಾರ್ಧದಲ್ಲಿ ಬಸ್ ಸಂಪೂರ್ಣವಾಗಿ ಬೆಂಕಿಗೆಾಹುತಿಯಾದ ಭೀಕರ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ ಸಮೀಪ ನಡೆದಿದೆ. ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಬಸ್ಸಿನಲ್ಲಿ ಈ ಅನಾಹುತ ಸಂಭವಿಸಿದ್ದು, ಸಕಾಲದಲ್ಲಿ ಎಚ್ಚೆತ್ತುಕೊಂಡಿದ್ದರಿಂದ ಬಸ್ಸಿನಲ್ಲಿದ್ದ 7 ಜನ ಪ್ರಯಾಣಿಕರು ದೊಡ್ಡ ದುರಂತದಿಂದ ಪಾರಾಗಿದ್ದಾರೆ.


ಬೆಂಕಿ ಕಾಣಿಸಿಕೊಂಡ ಕೂಡಲೇ ಪ್ರಯಾಣಿಕರನ್ನು ಕೆಳಗಿಳಿಸಿದ ನಿರ್ವಾಹಕರ ಸಮಯಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಉಡುಪಿ ಅಗ್ನಿಶಾಮಕ ಸಿಬ್ಬಂದಿಯವರು ತಕ್ಷಣ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ.

Advt
error: Content is protected !!