ಪುಂಜಾಲಕಟ್ಟೆ: ಹಾಡಹಗಲೇ ಸಿಮೆಂಟ್ ವ್ಯಾಪಾರಿಯ ದರೋಡೆ, 8 ಲಕ್ಷ ಹಣದೊಂದಿಗೆ ಎಸ್ಕೇಪ್!!

ಬಂಟ್ವಾಳ: ಮಣಿಹಳ್ಳ–ಕಕ್ಯಪದವು ರಸ್ತೆಯ ಮಣಿನಾಲ್ಕೂರು ಗ್ರಾಮದ ಮುಲ್ಕಾಜೆಮಾಡ ಎಂಬಲ್ಲಿ ಹಾಡಹಗಲೇ ಸುರತ್ಕಲ್ ಮೂಲದ ಬೈಕ್ ಸವಾರನನ್ನು ಅಡ್ಡಗಟ್ಟಿ ತಲವಾರು ತೋರಿಸಿ ಬೆದರಿಸಿ 8 ಲಕ್ಷ ರೂಪಾಯಿ ದರೋಡೆ ನಡೆಸಿದ ಘಟನೆ ಇಂದು ಮಧ್ಯಾಹ್ನ ನಡೆದಿದೆ.
ಸುರತ್ಕಲ್ ನಿವಾಸಿ ಮಯ್ಯದಿ ಅವರು ಅಂಗಡಿಗಳಿಗೆ ಸಗಟು ದರದಲ್ಲಿ ಸಿಮೆಂಟ್ ಪೂರೈಕೆ ಮಾಡುತ್ತಿದ್ದು ಅದರ ಕಲೆಕ್ಷನ್ ಹಣವನ್ನು ಹಿಡಿದುಕೊಂಡು ಬೈಕ್ ನಲ್ಲಿ ಹೋಗುತ್ತಿದ್ದ ವೇಳೆ ಈ ಘಟನೆ ನಡೆದಿದೆ.
ಎರಡು ಬೈಕ್ ಗಳಲ್ಲಿ ಬಂದ ನಾಲ್ವರು ಆರೋಪಿಗಳು ಮಯ್ಯದಿ ಅವರನ್ನು ಅಡ್ಡಗಟ್ಟಿ ತಲವಾರು ತೋರಿಸಿ ಬೆದರಿಸಿ ಅವರ ಬಳಿಯಿದ್ದ ಹಣದ ಬ್ಯಾಗ್ ಕಸಿದುಕೊಂಡು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.

Advt

ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

error: Content is protected !!