ಉಡುಪಿ: ಮುದರಂಗಡಿಯ ಸೈಂಟ್ ಕ್ಷೇವಿಯರ್ ಚರ್ಚ್ ಕಾಂಪ್ಲೆಕ್ಸ್‌ನಲ್ಲಿ ನಡೆದ ಪ್ರಿನ್ಸ್ ಎಂಟರ್‌ಪ್ರೈಸಸ್ ಮಾಲಕ ಡೇವಿಡ್ ಡಿಸೋಜಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಮತ್ತೋರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಪ್ರಕರಣದಲ್ಲಿ ನೇರವಾಗಿ ಭಾಗಿಯಾಗಿದ್ದ ಅನ್ನೋಲ್ ರಸ್ತೋಗಿ ಹಾಗೂ ಜಿಯಾಹುಲ್ ವಾಜುಲ್ ಶೇಖ್ ಅಲಿಯಾಸ್ ದೀಪಕ್ ಅವರನ್ನು ಈಗಾಗಲೇ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಪ್ರಕರಣದ ಮೊದಲ ಆರೋಪಿ ರಾಜು ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸರ್ಕಾರಿ ನೌಕರರ ಮೇಲೆ ನಡೆದ ಕೊಲೆ ಯತ್ನ ಪ್ರಕರಣದಲ್ಲಿ ಗಾಯಗೊಂಡಿದ್ದು, ಅಜ್ಜರಕಾಡು ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
