ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಅನುದಾನ ಒದಗಿಸುವಂತೆ ಆದಿದ್ರಾವಿಡ ಸಮಾಜ ಸೇವಾ ಸಂಘದ ನಿಯೋಗದಿಂದ ಸಮಾಜ ಕಲ್ಯಾಣ ಇಲಾಖೆ ಸಚಿವ ಕೆ.ಎಚ್.ಮುನಿಯಪ್ಪರಿಗೆ ಮನವಿ

ಬೆಂಗಳೂರು: ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ,ರವರ ನೇತೃತ್ವದಲ್ಲಿ ಜಿಲ್ಲಾ ಆದಿದ್ರಾವಿಡ ಸಮಾಜ ಸೇವಾ ಸಂಘದ ನಿಯೋಗವು ಸಮಾಜ ಕಲ್ಯಾಣ ಇಲಾಖೆ ಸಚಿವ ಕೆ ಎಚ್ ಮುನಿಯಪ್ಪ ರವರನ್ನು ಭೇಟಿ ಮಾಡಿ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಶೀಘ್ರ ಅನುದಾನ ಬಿಡುಗಡೆ ಮಾಡಲು ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಸಂಜೀವ ಕೋಟ್ಯಾನ್, ಗೌರವಾಧ್ಯಕ್ಷ ರಘುನಾಥ ಅತ್ತಾವರ, ಉಪಾಧ್ಯಕ್ಷ ಅಣ್ಣು ಕುಂಜತ್ತ್ ಬೈಲ್, ಚೈತನ್ಯ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ಕೃಷ್ಣ ಸೂಟರ್ ಪೇಟೆ, ಜಿಲ್ಲಾ ವಕ್ತಾರ ರಾಮ್ ಕುಮಾರ್* ಹಾಗೂ ಸದಸ್ಯ ಅಕ್ಷಯ್ ಗೇರುಕಟ್ಟೆ ಮತ್ತಿತರರು ಉಪಸ್ಥಿತರಿದ್ದರು.

Advt
error: Content is protected !!