
ಸುರತ್ಕಲ್: ಇಂದು ಮುಂಜಾನೆ ಪಣಂಬೂರು ಬೀಚ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರ್ಕಳದಿಂದ ಮಂಗಳೂರಿಗೆ ಬರುತ್ತಿದ್ದ ವಿಶಾಲ್ ಖಾಸಗಿ ಎಕ್ಸ್ ಪ್ರೆಸ್ ಬಸ್ ಪಲ್ಟಿಯಾದ ಘಟನೆ ನಡೆದಿದ್ದು ಘಟನೆಯಲ್ಲಿ ಪ್ರಯಾಣಿಕರು ಪವಾಡಸದೃಶವಾಗಿ ಅಪಾಯದಿಂದ ಪಾರಾಗಿದ್ದಾರೆ.
ಬೆಳಗ್ಗೆ8 ಗಂಟೆಯ ಸುಮಾರಿಗೆ ಘಟನೆ ನಡೆದಿದ್ದು ಹೆದ್ದಾರಿಯ ತೀರಾ ಎಡಬದಿಗೆ ಬಸ್ ಚಲಿಸಿದ ಪರಿಣಾಮ ಚರಂಡಿಗೆ ವಾಲಿ ಪಲ್ಟಿ ಹೊಡೆಯಿತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.