
ಸುರತ್ಕಲ್: ಮಧ್ಯ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸರಕಾರಿ ಪ್ರೌಢಶಾಲೆಗೆ ಸುರತ್ಕಲ್ ಲಯನ್ಸ್ ಕ್ಲಬ್ ವತಿಯಿಂದ ಧ್ವನಿವರ್ಧಕ ವ್ಯವಸ್ಥೆಯನ್ನು ಕೊಡುಗೆಯಾಗಿ ನೀಡಿದ್ದು ಅದರ ಹಸ್ತಾಂತರ ಕಾರ್ಯಕ್ರಮ ಶಾಲೆಯಲ್ಲಿ ಜರುಗಿತು. ಸುರತ್ಕಲ್ ಲಯನ್ಸ್ ಕ್ಲಬ್ ಅಧ್ಯಕ್ಷ ಜಯೇಶ್ ಗೋವಿಂದ್ ಹಸ್ತಾಂತರಿಸಿದರು.

ಕಾರ್ಯದರ್ಶಿ ತುಳಸಿರಾಜ್ ಕೋಶಾಧಿಕಾರಿ ಮನಿಷ್ ಕುಮಾರ್, ನಿಕಟಪೂರ್ವಧ್ಯಕ್ಷೆ ಶಶಿಕಲಾ ಶೆಟ್ಟಿ, ಲಯನ್ ಮೊಯಿದಿನ್ ಕುಂಞ, ಮೖಮುನಾ, ರಾಜಯ್ಯ, ಅಮೃತ, ಪ್ರಸಾದ್, ವಿದ್ಯಾನಿಧಿ ಎಜುಕೇಶನ್ ಟ್ರಸ್ಟ್ ಕೋಶಾಧಿಕಾರಿ ವಿಠಲ ಶೆಟ್ಟಿ, ಸದಸ್ಯರಾದ ವಜ್ರಾಕ್ಷಿ ಪಿ ಶೆಟ್ಟಿ, ಶಾಲಾಭಿವೃದ್ದಿ ಸಮಿತಿ ಉಪಾಧ್ಯಕ್ಷೆ ಶಶಿಕಲಾ, ಸದಸ್ಯರಾದ ಹರೀಶ್ ಭಂಡಾರಿ, ಲೀಲಾಧರ ಶೆಟ್ಟಿ, ರಿತೇಶ್ ಶೆಟ್ಟಿ, ಶಾಲೆಯ ಶಿಕ್ಷಕಿ ಶ್ವೇತಾ, ಪವಿತ್ರ ಮುಂತಾದವರು ಉಪಸ್ಥಿತರಿದ್ದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಅನಿಲ್ ಸಾಲ್ಯಾನ್ ವಹಿಸಿದ್ದರು ವಿದ್ಯಾನಿಧಿ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಪುಷ್ಪರಾಜ್ ಶೆಟ್ಟಿ ಸ್ವಾಗತಿಸಿ ಧನ್ಯವಾದ ಸಮರ್ಪಿಸಿದರು.
