“ಟಾಸ್ ಸಿನಿಮಾ ರಾಜ್ಯಾದ್ಯಂತ ಯಶಸ್ಸು ಕಾಣಲಿ” -ನಳಿನ್ ಕುಮಾರ್ ಕಟೀಲ್

ಬಹುನಿರೀಕ್ಷಿತ ಟಾಸ್ ಸಿನಿಮಾ ರಾಜ್ಯಾದ್ಯಂತ ಬಿಡುಗಡೆ

ಮಂಗಳೂರು: ಅವಿಕಾ ಪ್ರೊಡಕ್ಷನ್ ಮತ್ತು ಬಿಆರ್ ಬಿ ಪ್ರೊಡಕ್ಷನ್ ಲಾಂಛನದಲ್ಲಿ ತಯಾರಾಗಿರುವ ಅರ್ಜುನ್ ದೇವ್ ನಿರ್ದೇಶನ, ನಟನೆಯ “ಟಾಸ್” ತುಳು ಸಿನಿಮಾ ಬಿಗ್ ಸಿನೆಮಾಸ್ ನಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಾದ್ಯಂತ ಬಿಡುಗಡೆಯಾಯಿತು.
ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ದೀಪ ಬೆಳಗಿಸುವ ಮೂಲಕ ಸಿನಿಮಾಕ್ಕೆ ಚಾಲನೆ ನೀಡಿ ಮಾತಾಡಿ, “ಇಂದು ಎರಡು ವಿಶೇಷ ದಿನವಾಗಿದೆ. ಒಂದೆಡೆ ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ ಸಭೆ ನಡೆಯುತ್ತಿದ್ದರೆ ಇನ್ನೊಂದೆಡೆ ತುಳು ಭಾಷೆಯ ಬಹು ನಿರೀಕ್ಷಿತ ಸಿನಿಮಾ ಟಾಸ್ ಬಿಡುಗಡೆಯಾಗುತ್ತಿದೆ. ದೇವದಾಸ್ ಕಾಪಿಕಾಡ್ ಅವರು ನಮಗೆಲ್ಲ ಹೀರೋ ಇದ್ದಂತೆ. ಅವರು ಮುಟ್ಟಿದ್ದೆಲ್ಲಾ ಬಂಗಾರವಾಗುತ್ತದೆ ಹಾಗೆಯೇ ಈ ಸಿನಿಮಾ ಕೂಡ ಕಾಂತಾರದಂತೆ ಯಶಸ್ಸು ಕಾಣಲಿ“ ಎಂದರು.

ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಮಾತಾಡಿ, ”ಇಂದು ರಂಗಭೂಮಿಯ ಹಿರಿಯ ಕಲಾವಿದ ದೇವದಾಸ್ ಕಾಪಿಕಾಡ್ ಅವರ ಟಾಸ್ ಸಿನಿಮಾ ಬಿಡುಗಡೆಯಾಗುತ್ತಿದೆ. ತುಳುವರು ಎಲ್ಲರೂ ಥಿಯೇಟರ್ ಗೆ ಬಂದು ಸಿನಿಮಾ ನೋಡಿದರೆ ಒಂದೊಳ್ಳೆ ಸಿನಿಮಾ ಗೆಲ್ಲುತ್ತದೆ“ ಎಂದರು.
ಖ್ಯಾತ ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ಮಾತಾಡಿ, “ಟಾಸ್ ಸಿನಿಮಾ ಕಾಪಿಕಾಡ್ ರವರಿಗೆ ಕಾಸ್ ಮಾಡಿಕೊಡಲಿ. ತುಳುವರಿಗೆ ಸಮಸ್ತ ತುಳುನಾಡಿಗೆ ಈ ಸಿನಿಮಾ ಹೆಸರು ಮಾಡಲಿ. ಅರ್ಜುನ್ ದೇವ್ ನಟನೆ ನಿರ್ದೇಶನದ ಈ ಸಿನಿಮಾ ಕನ್ನಡ ಮತ್ತು ತುಳುಭಾಷೆಯಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿರುವುದು ಹೆಮ್ಮೆಯ ವಿಚಾರ” ಎಂದರು.
ಪ್ರಕಾಶ್ ಪಾಂಡೇಶ್ವರ್ ಮಾತಾಡಿ, “ಸಿನಿಮಾದ ಪ್ರೀಮಿಯರ್ ಶೋ ನೋಡಿದವರೆಲ್ಲ ಸಿನಿಮಾವನ್ನು ಹೋಗಳುತ್ತಿದ್ದಾರೆ. ಸಿನಿಮಾ ಒಳ್ಳೆಯ ಹೆಸರು ಮಾಡಲಿ” ಎಂದು ಶುಭ ಹಾರೈಸಿದರು.
ಶಿವಶರಣ್ ಶೆಟ್ಟಿ ಮಾತಾಡಿ, “ಅರ್ಜುನ್ ಕಾಪಿಕಾಡ್ ಈ ಸಿನಿಮಾಕ್ಕಾಗಿ ಸಾಕಷ್ಟು ದುಡಿದಿದ್ದಾರೆ. ಅವರಿಗೆ ಯಶಸ್ಸು ಸಿಗಲಿ” ಎಂದರು.
ಡಾ.ದೇವದಾಸ್ ಕಾಪಿಕಾಡ್, ಕದ್ರಿ ಮಣಿಕಾಂತ್, ಶರ್ಮಿಳಾ ಕಾಪಿಕಾಡ್, ವೀರೇಂದ್ರ ಶೆಟ್ಟಿ ಕಾವೂರು, ಪ್ರಕಾಶ್ ತೂಮಿನಾಡ್, ರಾಕೇಶ್, ಫಯಾಜ್, ಗಿರೀಶ್ ಶೆಟ್ಟಿ ಪೆರ್ಮುದೆ, ಚೈತ್ರ ಶೆಟ್ಟಿ, ಭೋಜರಾಜ್ ವಾಮಂಜೂರು ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸಿನಿಮಾ ಕುರಿತು:
ರಾಜ್ಯ ಪ್ರಶಸ್ತಿ ಪುರಸ್ಕೃತ ತೆಲಿಕೆದ ಬೊಳ್ಳಿ ಡಾ|| ದೇವದಾಸ್ ಕಾಪಿಕಾಡ್ ರಚನೆ ಸಂಭಾಷಣೆ, ಅರ್ಜುನ್ ದೇವ್ ನಿರ್ದೇಶನ ಮತ್ತು ಅಭಿನಯದ “ಟಾಸ್” ಸಿನಿಮಾದ ಚಿತ್ರೀಕರಣ ಎರಡು ಹಂತಗಳಲ್ಲಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಸಿನಿಮಾದ ಚಿತ್ರೀಕರಣ ನಡೆದಿದೆ.
ನಿರ್ಮಾಪಕರು: ಪಿ ಆ್ಯಂಡ್ ವೈ ವಲ್ಡ್ ಟೂರ್ಸ್ ಎಲ್ ಎಲ್ ಪಿ ಸಾಗರ್ ಪೂಜಾರಿ, ಕಥೆ–ಚಿತ್ರಕಥೆ–ಸಂಭಾಷಣೆ ಗೀತೆಗಳು, ಡಾ. ದೇವದಾಸ್ ಕಾಪಿಕಾಡ್, ನಿರ್ದೇಶಕರು ಅರ್ಜುನ್ ದೇವ್, ಸಹ ನಿರ್ದೇಶಕರು ಯಶಾಂತ್ ಕಲ್ಲಡ್ಕ, ರಾಕೇಶ್ ಬಿ.ಜೆ. ವಿಕ್ರಮ್ ದೇವಾಡಿಗ, ಸಹಾಯಕ ನಿರ್ದೇಶಕರು ಸೌರವ್ ರಾಮ್ ಸುಜಿತ್ ವಿನೋದ್ ಆಶಿಷ್ ರಾವ್ ಛಾಯಾಗ್ರಹಣ ಜೋಯೆಲ್ ಶಮನ್ ಡಿ’ಸೋಜಾ, ಸಹಾಯಕ ಛಾಯಾಗ್ರಾಹಕರು ಅಮನ್ ಪ್ರಖ್ಯಾತ್, ಕಲಾ ನಿರ್ದೇಶನ ರಾಜೇಶ್ ಕೊಳಕೆ ರಾಜೇಶ್ ಬಾಂಧ್ಯೋಡ್, ಸಂಕಲನ ಯಶ್ವಿನ್ ಕೆ. ಶೆಟ್ಟಿಗಾರ್, ಸಂಗೀತ ಮಣಿಕಾಂತ್ ಕದ್ರಿ, ಕಾರ್ಯಕಾರಿ ನಿರ್ಮಾಪಕರು ಸಂದೀಪ್ ಶೆಟ್ಟಿ, ವಸ್ತ್ರ ವಿನ್ಯಾಸ ಅನುಪ್ ಸಾಗರ್. ವಿತರಕರು ಸಚಿನ್ ಎಎಸ್ ಉಪ್ಪಿನಂಗಡಿ.
ತಾರಾಗಣದಲ್ಲಿ ಡಾ ||ದೇವದಾಸ್ ಕಾಪಿಕಾಡ್, ಅರ್ಜುನ್ ದೇವ್, ನವೀನ್ ಡಿ ಪಡೀಲ್, ಭೋಜರಾಜ್ ವಾಮಂಜೂರ್, ಅರವಿಂದ್ ಬೋಳಾರ್, ಪ್ರಕಾಶ್ ತುಮಿನಾಡು, ದೀಪಕ್ ರೈ ಪಾಣಾಜೆ, ಪುಷ್ಪರಾಜ್ ಬೊಳ್ಳಾರ್, ಸುತೇಜ್ ಶೆಟ್ಟಿ, ಸಂಗೀತಾ ಶೆಟ್ಟಿ, ಶೋಭರಾಜ್ ಪಾವೂರ್, ಚೈತ್ರಾ ಶೆಟ್ಟಿ, ಕೃತಿ ಶೆಟ್ಟಿ ಅಭಿನಯಿಸಿದ್ದಾರೆ.
ಟಾಸ್ ತುಳು ಹಾಗೂ ಕನ್ನಡ ಭಾಷೆಯಲ್ಲಿ ತಯಾರಾಗಿದೆ. ಎರಡನ್ನೂ ಬೇರೆ ಬೇರೆಯಾಗಿ ಚಿತ್ರೀಕರಣ ಮಾಡಲಾಗಿದೆ. ಈ ಸಿನಿಮಾಗಳಿಗೆ ನಟ ಗಣೇಶ್ ಮತ್ತು ಶಿಲ್ಪಾ ಗಣೇಶ್ ಸಾಥ್ ನೀಡಿದ್ದಾರೆ.
ಟಾಸ್ ಸಿನಿಮಾ ಮಂಗಳೂರು, ಸುರತ್ಕಲ್, ಪಡುಬಿದ್ರೆ, ಉಡುಪಿ, ಮಣಿಪಾಲ, ಕುಂದಾಪುರ ಕಾರ್ಕಳ, ಬೆಳ್ತಂಗಡಿ, ಪುತ್ರೂರು, ಸುಳ್ಯ ಸಹಿತ ಬೇರೆ ಬೇರೆ ಕಡೆಗಳಲ್ಲಿ ಬಿಡುಗಡೆಗೊಳ್ಳಲಿದೆ. ಬೆಂಗಳೂರು, ಮೈಸೂರು ಮೊದಲಾದ ಕಡೆಗಳಲ್ಲೂ ಸಿನಿಮಾ ಬಿಡುಗಡೆಯಾಗಲಿದೆ.
ಇದೊಂದು ಪಕ್ಕಾ ಕಾಮಿಡಿ ಸಿನಿಮಾ, ಸೆಂಟಿಮೆಂಟ್, ಆ್ಯಕ್ಷನ್, ಥ್ರಿಲ್ಲರ್ ಹೀಗೆ ಎಲ್ಲಾ ಅಂಶಗಳನ್ನು ಒಳಗೊಂಡಿರುವ ಪಕ್ಕಾ ಫ್ಯಾಮಿಲಿ ಪ್ಯಾಕೇಜ್, ಎಲ್ಲಾ ಚಿಂತೆಗಳನ್ನು ಬಿಟ್ಟು ಎಂಜಾಯ್ ಮಾಡಬೇಕೆಂದು ರೆಡಿ ಮಾಡಿರುವ ಸಿನಿಮಾ ಇದು. ಹಣ ಕೊಟ್ಟು ಬರುವ ಪ್ರೇಕ್ಷಕರಿಗೆ ಏನೇನು ಬೇಕೋ ಎಲ್ಲವೂ “ಟಾಸ್” ಸಿನಿಮಾದಲ್ಲಿದೆ ಎಂದು ನಿರ್ದೇಶಕ ಅರ್ಜುನ್ ದೇವ್ ತಿಳಿಸಿದ್ದಾರೆ.

Advt
error: Content is protected !!