ಬಾಳಿಲ: ಮಹರ್ಷಿ ವಾಲ್ಮೀಕಿ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

ಸುಳ್ಯ: ಮಹರ್ಷಿ ವಾಲ್ಮೀಕಿ ಶಾಲೆ ಬಾಳಿಲದಲ್ಲಿ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು, ಎಸ್ ಡಿ ಎಂ ಸಿ ಅಧ್ಯಕ್ಷರಾದ  ಲಕ್ಷ್ಮಣಗೌಡ, ಉಪಾಧ್ಯಕ್ಷರಾದ ತುಳಸಿಯವರು ಜ್ಞಾನದ ಸಂಕೇತ ದೀಪ ಪ್ರಜ್ವಲಿಸುವುದರ ಮುಖಾಂತರ ಕಾರ್ಯಕ್ರಮಕ್ಕೆ ಸಾಂಕೇತಿಕವಾಗಿ ಚಾಲನೆ ನೀಡಿದರು,

ವೇದಿಕೆಯಲ್ಲಿ ಶಾಲಾ ಮುಖ್ಯ ಗುರುಗಳಾದ ಸಿಎಚ್ ಶಿವಕುಮಾರ್ ರವರು ಮತ್ತು ಶಾಲಾ ಶಿಕ್ಷಕಿಯರಾದ ಸುಜಾತ, ರೋಹಿಣಿ, ಭವ್ಯ, ಉಮಾಶ್ರೀ, ಕೃತಿ ಇವರುಗಳು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಶಿಕ್ಷಕರಿಗೆ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ನಂತರ ಬಹುಮಾನ ವಿತರಿಸಿ ಶಿಕ್ಷಕರಿಗೆ ಗೌರವಾರ್ಪಣೆ ಸಲ್ಲಿಸಲಾಯಿತು. ವಿದ್ಯಾರ್ಥಿಗಳು ಶಿಕ್ಷಕರಿಂದ ಆಶೀರ್ವಾದವನ್ನು ಪಡೆದರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಲಕ್ಷ್ಮಣಗೌಡ ಇವರು ಮಾತನಾಡಿ ಶಿಕ್ಷಕರು ಕೇವಲ ಪಾಠವನ್ನು ಬೋಧಿಸುವವರಲ್ಲ ಬದಲಾಗಿ ವಿದ್ಯಾರ್ಥಿಗಳ ಭವಿಷ್ಯ ಮತ್ತು ಈ ದೇಶದ ಭವಿಷ್ಯವನ್ನು ಕಟ್ಟುವ ಕೆಲಸ ಮಾಡುತ್ತಿದ್ದಾರೆ ಎಂದು ಅಭಿಪ್ರಾಯ ಪಟ್ಟರು.

ಕೊನೆಯಲ್ಲಿ ವಿದ್ಯಾರ್ಥಿಗಳು ವಂದಿಸಿದರು. ಕಮಲಾಕ್ಷರವರು ಕಾರ್ಯಕ್ರಮವನ್ನು ನಿರ್ವಹಿಸಿದರು

Advt
error: Content is protected !!