ಬಂಟರ ಯಾನೆ ನಾಡವರ ಅಭಿವೃದ್ಧಿ ನಿಗಮ ಸ್ಥಾಪನೆಗೆ ಡಾ.ವಿಶ್ವ ಸಂತೋಷ ಭಾರತೀ ಶ್ರೀ ಮನವಿ

ಮಂಗಳೂರು: ಬಂಟರ ಯಾನೆ ನಾಡವರ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಬೇಕಾಗಿ ಹಲವು ಬಂಟ ಪ್ರಮುಖ ರೊಂದಿಗೆ ಮಂಗಳೂರಿನಲ್ಲಿ ಬಾರ್ಕೂರು ಮಹಾ ಸಂಸ್ಥಾನದ ಪೂಜ್ಯ ವಿದ್ಯಾವಾಚಸ್ಪತಿ ಡಾ.ವಿಶ್ವ ಸಂತೋಷ ಭಾರತೀ ಶ್ರೀಗಳು ಮುಖ್ಯ ಮಂತ್ರಿ ಡಿ. ಕೆ. ಶಿವಕುಮಾರ್ ರವರಿಗೆ ಮನವಿ ನೀಡಿ ಸಮಾಜದ ಬಗ್ಗೆ ಸಮಗ್ರ ಮಾಹಿತಿ ನೀಡಿದರು.


ಇದಕ್ಕೆ ಸ್ಪಂದಿಸಿದ ಮುಖ್ಯ ಮಂತ್ರಿಗಳು ಇನ್ನು ಒಂದು ತಿಂಗಳಲ್ಲಿ ಸ್ವಾಮೀಜಿಯವರೊಂದಿಗೆ ಚರ್ಚಿಸಿ ನಿರ್ಧಾರ ತೆಗೆದು ಕೊಳ್ಳುವುದಾಗಿ ತಿಳಿಸಿದ್ದಾರೆ. ಶ್ರೀಗಳೊಂದಿಗೆ ಮಾಜಿ ಸಚಿವರಾದ ಬಿ.ರಮಾನಾಥ ರೈ, ಮಿಥುನ್ ರೈ, ತುಂಬೆ ಪ್ರಕಾಶ್ ಶೆಟ್ಟಿ, ಕಾವೂರು ಆನಂದ ಶೆಟ್ಟಿ ,ರವೀಂದ್ರ ರೈ ಕಲ್ಲಿಮಾರು, ಜಯಶೀಲ ಅಡ್ಯoತ್ಯಾಯ ಅಡ್ಯಾರ್ ಗುತ್ತು , ರವೀಂದ್ರ ಶೆಟ್ಟಿ ಉಳಿದೊಟ್ಟು, ಆನಂದ ಶೆಟ್ಟಿ ತೊಕ್ಕೊಟ್ಟು, ಸುರೇಶ್ ಶೆಟ್ಟಿ ಅಂಬ್ಲಮೊಗರು ಮತ್ತಿತರ ಬಂಟ ಪ್ರಮುಖರು ಜತೆಗಿದ್ದರು.

Advt
error: Content is protected !!