ಬಜ್ಪೆ ಇನ್ ಸ್ಪೆಕ್ಟರ್ ಲೋಕಾಯುಕ್ತ ಬಲೆಗೆ! 5 ಸಾವಿರ ಲಂಚ ಸ್ವೀಕರಿಸುವ ವೇಳೆ ದಾಳಿ!!

ಸುರತ್ಕಲ್: ಲೋಕಾಯುಕ್ತ ಪೊಲೀಸರು ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದ ಬಜ್ಪೆ ಪೊಲೀಸ್ ಇನ್ ಸ್ಪೆಕ್ಟರ್ ಬಾಲಕೃಷ್ಣ ಅವರನ್ನು ಬಲೆಗೆ ಕೆಡವಿದ್ದಾರೆ. 5 ಸಾವಿರ ರೂಪಾಯಿ ಹಣ ಸ್ವೀಕರಿಸುವ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.
ವಂಚನೆ ಪ್ರಕರಣವೊಂದರಲ್ಲಿ ಅಮಾನತ್ತಿನಲ್ಲಿ ಇರಿಸಲಾಗಿದ್ದ ಹಣವನ್ನು ಬಿಡುಗಡೆ ಮಾಡಲು ಪೊಲೀಸ್ ನಿರೀಕ್ಷಕ ಬಾಲಕೃಷ್ಣ ಅವರು ಟು 25 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದು ಈಗಾಗಲೇ 15 ಸಾವಿರ ರೂಪಾಯಿ ಲಂಚದ ಹಣವನ್ನು ಸ್ವೀಕರಿಸಿದ್ದು 5 ಸಾವಿರ ರೂಪಾಯಿ ಹಣವನ್ನು ಸ್ವೀಕರಿಸುವ ವೇಳೆ ಮಂಗಳೂರು ಲೋಕಾಯುಕ್ತ ಪೊಲೀಸರು ಆರೋಪಿ ಇನ್ಸ್‌ಪೆಕ್ಟರ್ ಬಾಲಕೃಷ್ಣ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಈ ಹಿಂದೆ ಬಾಲಕೃಷ್ಣ ಅವರು ಮೈಸೂರು ವಿಜಯನಗರ, ಹಾಸನ, ಉಳ್ಳಾಲ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಇಂತದ್ದೇ ಆರೋಪ ಕೇಳಿ ಬಂದಿದ್ದು ಎತ್ತಂಗಡಿ ಮಾಡಲಾಗಿತ್ತು.

Advt
error: Content is protected !!