
ಬೆಂಗಳೂರು: ಕಗ್ಗಂಟಾಗಿರುವ ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಭೀಕರ ಹತ್ಯೆ ಪ್ರಕರಣದ ಮರುತನಿಖೆ ನಡೆಸುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಹೊಸದಾಗಿ SIT ರಚನೆ ಮಾಡಿದೆ. ಹಿಂದಿನ SIT ತಂಡದ ಯಾರನ್ನೂ ಹೊಸ ತಂಡಕ್ಕೆ ಸೇರಿಸಬಾರದು ಎಂದು ಕೋರ್ಟ್ ಆಜ್ಞೆ ನೀಡಿದ್ದು ಅದರಂತೆ ಹಿಂದೆ ಮಂಗಳೂರು ಕಮಿಷನರ್ ಆಗಿದ್ದು ಜನಮನ್ನಣೆ ಪಡೆದಿದ್ದ ಐಪಿಎಸ್ ಅಧಿಕಾರಿ ಶಶಿಕುಮಾರ್ ನೇತೃತ್ವದಲ್ಲಿ ತಂಡವನ್ನು ರಚಿಸಿದೆ.
ತಂಡದಲ್ಲಿ ಇರುವ ಇತರೆ ಅಧಿಕಾರಿಗಳು:
ಸಿ.ಹೆಚ್ ಸುಧೀರ್ ಕುಮಾರ್ ರೆಡ್ಡಿ, ಐ.ಪಿ.ಎಸ್, ಪೊಲೀಸ್ ಮಂಗಳೂರು ನಗರ ಆಯುಕ್ತರು,
ನಿಶಾ ಜೇಮ್ಸ್, ಐ.ಪಿ.ಎಸ್, ಪೊಲೀಸ್ ಅಧೀಕ್ಷಕರು, ರಾಜ್ಯ ಗುಪ್ತ ವಾರ್ತೆ, ಬೆಂಗಳೂರು.
ಲೋಕೇಶ್ ಜಗಲಸಾರ್, ಐ.ಪಿ.ಎಸ್ ಪೊಲೀಸ್ ಅಧೀಕ್ಷಕರು, ಸಿ.ಐ.ಡಿ, ಬೆಂಗಳೂರು.
ವೆಂಕಟೇಶ್ ಪ್ರಸನ್ನ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು, ಬೆಂಗಳೂರು ಗ್ರಾಮಾಂತರ ಜಿಲ್ಲೆ.
ಮೇಲ್ಕಂಡ ವಿಶೇಷ ತನಿಖಾ ತಂಡವನ್ನು ರಚಿಸಿ ಪ್ರಕರಣದ ತನಿಖೆ ನಡೆಸುವಂತೆ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
