ಸುರತ್ಕಲ್ ಬಂಟರ ಭವನದಲ್ಲಿ ಮೂರು ದಿನಗಳ ಸಸ್ಯೋತ್ಸವ , ಆಹಾರ ಮೇಳ ಹಾಗೂ ಹೋಳಿಗೆ ಹಬ್ಬ ಆರಂಭ

ಸುರತ್ಕಲ್: ರೈತ ಕುಡ್ಲ ಪ್ರತಿಷ್ಠಾನ ನೇತೃತ್ವದಲ್ಲಿ ಬಂಟರ ಸಂಘ ಸುರತ್ಕಲ್ ಮತ್ತು ಲಯನ್ಸ್ ಕ್ಲಬ್ ಸುರತ್ಕಲ್ ಇವುಗಳ ಸಹಯೋಗದೊಂದಿಗೆ ಪ್ರಪ್ರಥಮ ಬಾರಿಗೆ ಸಸ್ಯೋತ್ಸವ , ಆಹಾರ ಮೇಳ ಹಾಗೂ ಹೋಳಿಗೆ ಹಬ್ಬ ಕಾರ್ಯಕ್ರಮದ ಉದ್ಘಾಟನಾ ಕಾರ್ಯಕ್ರಮ ಶುಕ್ರವಾರ ಬೆಳಗ್ಗೆ ಸುರತ್ಕಲ್ ಬಂಟರ ಭವನದಲ್ಲಿ ಜರುಗಿತು.

ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತಾಡಿದ ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಜಗನ್ನಾಥ ಶೆಟ್ಟಿ ಬಾಳ ಅವರು, “ರೈತ ಕುಡ್ಲ ಪ್ರತಿಷ್ಠಾನ
ಬಂಟರ ಸಂಘದ ಸಹಯೋಗದಲ್ಲಿ ಆಯೋಜನೆ ಮಾಡಿರುವ ಈ ಕಾರ್ಯಕ್ರಮಕ್ಕೆ ಒಳ್ಳೆಯ ರೆಸ್ಪಾನ್ಸ್ ಸಿಗುತ್ತಿದೆ. ಇಲ್ಲಿ ಜನರಿಗೆ ಕೈಗೆಟುಕುವ ಬೆಲೆಯಲ್ಲಿ ಬಟ್ಟೆಬರೆ, ಹೂವು ತರಕಾರಿ ಸಸ್ಯಗಳು, ತಿಂಡಿ ತಿನಿಸು, ನಾನಾ ಬಗೆಯ ಆಹಾರ ಖಾದ್ಯಗಳು ಸಿಗುತ್ತಿದೆ. ಎಲ್ಲರೂ ಆಗಮಿಸುವ ಮೂಲಕ ಕಾರ್ಯಕ್ರಮದ ಪ್ರಯೋಜನ ಪಡೆದುಕೊಳ್ಳಬೇಕು” ಎಂದರು.

ಬಳಿಕ ಮಾತಾಡಿದ ಸುರತ್ಕಲ್ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಅಶೋಕ್ ಶೆಟ್ಟಿ ತಡಂಬೈಲ್ ಅವರು, “ರೈತ ಕುಡ್ಲ ಪ್ರತಿಷ್ಠಾನ ಒಂದು ಒಳ್ಳೆಯ ಕಾರ್ಯಕ್ರಮ ಹಮ್ಮಿಕೊಂಡಿದೆ. ಕಾರ್ಯಕ್ರಮ ಯಶಸ್ವಿಯಾಗಲು ಎಲ್ಲರ ಸಹಕಾರ ಬೇಕಿದೆ” ಎಂದರು.
ಸುಭಾಷಿತನಗರ ರೆಸಿಡೆಂಟ್ಸ್ ವೆಲ್ಫೇರ್ ಅಸೋಸಿಯೇಶನ್ ಅಧ್ಯಕ್ಷ ರಮೇಶ್‌ ಶೆಟ್ಟಿ ಮಾತಾಡಿ, “ನಮ್ಮ ಸುಭಾಷಿತ ನಗರದಲ್ಲಿ ಪ್ರಪ್ರಥಮ ಬಾರಿಗೆ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಜನತೆಯ ಪ್ರೋತ್ಸಾಹ ಹೆಚ್ಚು ಬೇಕು. ಎಲ್ಲರ ಸಹಕಾರದಿಂದ ಕಾರ್ಯಕ್ರಮ ಯಶಸ್ಸು ಕಾಣಲಿ” ಎಂದು ಶುಭ ಹಾರೈಸಿದರು.
ವೇದಿಕೆಯಲ್ಲಿ ಲಯನ್ಸ್ ಕ್ಲಬ್ ಸುರತ್ಕಲ್ ಇದರ ಅಧ್ಯಕ್ಷ ಜಯೇಶ್ ಗೋವಿಂದ್, ಬಂಟರ ಸಂಘ ಸುರತ್ಕಲ್ ಇದರ ಪ್ರಧಾನ ಕಾರ್ಯದರ್ಶಿ ಲೀಲಾಧರ ಶೆಟ್ಟಿ ಕಟ್ಲ, ಬಂಟರ ಸಂಘ ಸುರತ್ಕಲ್ ಮಹಿಳಾ ವೇದಿಕೆ ಅಧ್ಯಕ್ಷೆ ಸರೋಜಾ ಟಿ. ಶೆಟ್ಟಿ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಆಪದ್ಭಾಂಧವ ಸಂಘಟನೆಯ ಉಮೇಶ್ ಇಡ್ಯಾ, ರೈತಕುಡ್ಲ ಪ್ರತಿಷ್ಠಾನದ ಕಾರ್ಯದರ್ಶಿ ಲತೀಶ್ ಮಳಲಿ ಮತ್ತಿತರರು ಉಪಸ್ಥಿತರಿದ್ದರು.

Advt

ಬಂಟರ ಸಂಘ ಕೃಷಿ ಸಮಿತಿಯ ಸಂಚಾಲಕ ಸುಧಾಕರ ಶೆಟ್ಟಿ ಖಂಡಿಗೆ ಇವರನ್ನು ವೇದಿಕೆಯಲ್ಲಿ ಸನ್ಮಾನಿಸಲಾಯಿತು. ರೈತ ಕುಡ್ಲ ಪ್ರತಿಷ್ಠಾನದ ಅಧ್ಯಕ್ಷ ಭರತ್ ರಾಜ್ ಸೊರಕೆ ಪ್ರಾಸ್ತಾವಿಕ ಮಾತನ್ನಾಡಿ ಅತಿಥಿಗಳನ್ನು ಸ್ವಾಗತಿಸಿದರು.
ರಾಜೇಶ್ವರಿ ಡಿ. ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಲಯನ್ ರಾಜಯ್ಯ ವಂದಿಸಿದರು.

error: Content is protected !!