
ಪಣಜಿ: ಭಾರತೀಯ ಚಿತ್ರರಂಗದ ಖ್ಯಾತ ಹಿರಿಯ ನಟ ನಾನಾ ಪಾಟೇಕರ್ (75) ಅವರು ಇಂದು ಬೆಳಿಗ್ಗೆ ತೀವ್ರ ಹೃದಯ ಸ್ತಂಭನದಿಂದ ವಿಧಿವಶರಾಗಿದ್ದಾರೆ.
ಗೋವಾದ(Goa) ತಮ್ಮ ನಿವಾಸದಲ್ಲಿದ್ದಾಗ ಇಂದು ಬೆಳಿಗ್ಗೆ ಸುಮಾರು 5:20ರ ಸುಮಾರಿಗೆ ನಾನಾ ಪಾಟೇಕರ್(Nana Patekar) ತೀವ್ರ ಹೃದಯ ಸ್ತಂಭನ ಉಂಟಾಗಿದೆ. ತಕ್ಷಣವೇ ಅವರನ್ನು ರಕ್ಷಿಸಲು ವೈದ್ಯರು ಸತತ 45 ನಿಮಿಷಗಳ ಕಾಲ ನಿರಂತರವಾಗಿ ಸಿಪಿಆರ್ (CPR) ಪ್ರಕ್ರಿಯೆ ನಡೆಸಿದರಾದರೂ, ಯಾವುದೇ ಸ್ಪಂದನೆ ಸಿಗದೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ಮಣಿಪಾಲ್ ಆಸ್ಪತ್ರೆಯ ಆಂಕೊಲಾಜಿ ವಿಭಾಗದ ಮುಖ್ಯಸ್ಥ ಡಾ. ಶೇಖರ್ ಸಾಲ್ಕರ್ ಅಧಿಕೃತವಾಗಿ ಮಾಹಿತಿ ನೀಡಿದ್ದಾರೆ.
