ದಕ್ಷಿಣ ಕನ್ನಡ ಬಸ್ಸು ಮಾಲಕರ ಸಂಘ ಅಧ್ಯಕ್ಷರಾಗಿ ಅಝೀಝ್ ಪರ್ತಿಪಾಡಿ ಅವಿರೋಧ ಆಯ್ಕೆ


ಮಂಗಳೂರು: ಹೋಟೆಲ್ “ಎ ಜೆ ಗ್ರಾಂಡ್ ಎಲೈಟ್” ಸಭಾಂಗಣದಲ್ಲಿ ನಡೆದ ದಕ್ಷಿಣ ಕನ್ನಡ ಬಸ್ಸು ಮಾಲಕರ ಸಂಘದ ವಾರ್ಷಿಕ ಮಹಾ ಸಭೆಯಲ್ಲಿ ದಕ್ಷಿಣ ಕನ್ನಡ ಬಸ್ಸು ಮಾಲಕರ ಸಂಘದ ಅಧ್ಯಕ್ಷರಾಗಿ ಅಝೀಝ್ ಪರ್ತಿಪಾಡಿಯವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಇವರು ಸತತ ನಾಲ್ಕನೇ ಬಾರಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಇವರು ದಕ್ಷಿಣ ಕನ್ನಡ ಬಸ್ಸು ಮಾಲಕರ ಸಂಘದ ಪ್ರಧಾನ ಕಾರ್ಯದರ್ಶಿಯಾಗಿಯೂ, ಅಧ್ಯಕ್ಷ ರಾಗಿಯೂ ಹಾಗೂ ಪೂರ್ವ ವಲಯ ಬಸ್ ಮಾಲಕರ ಒಕ್ಕೂಟದ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿದ್ದರು.

Advt
error: Content is protected !!