ಬಿಹಾರದಲ್ಲಿ ಘೋರ ದುರಂತ: ಗಂಗಾನದಿಯಲ್ಲಿ ದೋಣಿ ಮುಳುಗಿ 14 ಮಂದಿ ಮೃತ್ಯು

ಬಿಹಾರ: ವೈಶಾಲಿ ಜಿಲ್ಲೆಯ ರಘೋಪುರ ಸಮೀಪ ನಿನ್ನೆ ತಡರಾತ್ರಿ ಅಂದಾಜು 30 ಜನರನ್ನು ಹೊತ್ತೊಯ್ಯುತ್ತಿದ್ದ ದೋಣಿ ಗಂಗಾ ನದಿಯಲ್ಲಿ ಮುಳುಗಿದ ಪರಿಣಾಮ ಮಕ್ಕಳೂ ಸೇರಿದಂತೆ ಕನಿಷ್ಠ 14ರಷ್ಟು ಮಂದಿ ಮೃತಪಟ್ಟಿದ್ದಾರೆ.
ದುರಂತಕ್ಕೀಡಾದ ದೋಣಿಯಲ್ಲಿದ್ದವರಲ್ಲಿ ಹೆಚ್ಚಿನವರು ಮಕ್ಕಳು. ನದಿಯ ಆಚೆಗಿನ ಗ್ರಾಮದಲ್ಲಿ ನಡೆಯುತ್ತಿದ್ದ ಔತಣಕೂಟದಲ್ಲಿ ಪಾಲ್ಗೊಳ್ಳಲು ರಾಮ್‌ಪುರ ಶ್ಯಾಮಚಂದ್ ಗ್ರಾಮದ ನಿವಾಸಿಗಳು ತೆರಳುತ್ತಿದ್ದಾಗ ರಾತ್ರಿ ಸುಮಾರು 8 ಗಂಟೆಗೆ ಈ ಘಟನೆ ಸಂಭವಿಸಿದೆ. ದೋಣಿಯಲ್ಲಿ ಸಾಮರ್ಥ್ಯಕ್ಕಿಂತ ಹೆಚ್ಚು ಜನರಿದ್ದ ಕಾರಣ ನಿಯಂತ್ರಣ ತಪ್ಪಿ ನದಿಯ ಮಧ್ಯಭಾಗದಲ್ಲಿ ಮುಳುಗಿದೆ ಎಂದು ಸ್ಥಳೀಯರು ಹೇಳುತ್ತಾರೆ.

Advt

ವೈಶಾಲಿ ಜಿಲ್ಲಾಧಿಕಾರಿ ವರ್ಷಾ ಸಿಂಗ್ ಅವರು ಪಿಟಿಐ ಸುದ್ದಿಸಂಸ್ಥೆಗೆ ಮಾಹಿತಿ ನೀಡಿ, “ರಘೋಪುರದಲ್ಲಿ ಗಂಗಾ ನದಿಯಲ್ಲಿ ದೋಣಿ ಮುಳುಗಿದ ಪರಿಣಾಮ 14 ಮಂದಿ ಮೃತಪಟ್ಟಿದ್ದು, ಆರು ಮಂದಿಯನ್ನು ರಕ್ಷಿಸಲಾಗಿದೆ” ಎಂದು ತಿಳಿಸಿದ್ದಾರೆ. ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ ಎಂದೂ ಅವರು ಹೇಳಿದ್ದಾರೆ.

error: Content is protected !!